
ಬೀದರ್: ನಗರದ ಅಂಗಡಿ-ಮುAಗಟ್ಟು, ಶಾಲಾ-ಕಾಲೇಜು, ಆಸ್ಪತ್ರೆ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳ ಮೇಲ್ಭಾಗದ ಶೇ ೬೦ ರಷ್ಟು ಭಾಗದಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಈ ಕುರಿತು ಮಹಾನಗರ ಪಾಲಿಕೆಯ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಪಾಲಿಕೆಯ ಅಧಿಕಾರಿಗೆ ಸಲ್ಲಿಸಿದರು.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ನಗರದಲ್ಲಿ ಪಾಲನೆಯಾಗುತ್ತಿಲ್ಲ. ಅನ್ಯ ಭಾಷೆ ನಾಮಫಲಕಗಳೇ ಹೆಚ್ಚಾಗಿ ವಿಜೃಂಭಿಸುತ್ತಿವೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ದೂರಿದರು.
ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸಂಬAಧಿಸಿದAತೆ ಹಿಂದೆ ಎರಡು ಬಾರಿ ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮಹಾನಗರ ಪಾಲಿಕೆ ಕನ್ನಡ ಭಾಷೆ ಅನುಷ್ಠಾನದ ಕುರಿತು ಉದಾಸೀನ ತೋರುತ್ತಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.
ನಗರದ ಸೌಂದರ್ಯ ಹೆಚ್ಚಿಸಲು ಅಳವಡಿಸಲಾದ ಆಕರ್ಷಕ ವಿದ್ಯುತ್ ಕಂಬಗಳಿಗೆ ಆಂಗ್ಲ ಭಾಷೆಯ ಪೋಸ್ಟ???ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಗೆ ಪರವಾನಗಿ ನೀಡಿದರು, ಸರ್ಕಾರದ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು.
ಅಕ್ಟೋಬರ್ ೩೦ ರ ಒಳಗೆ ನಗರದ ಎಲ್ಲ ಖಾಸಗಿ ಆಸ್ಪತ್ರೆ, ಹೋಟೆಲ್, ವಾಣಿಜ್ಯ, ಸಾರ್ವಜನಿಕ ಸಂಸ್ಥೆ ಹಾಗೂ ಇತರ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ದತ್ತು ಅಲ್ಲಂಕೇರೆ, ಉದಯ ಅಷ್ಟೂರೆ, ಶಿವತೀರ್ಥ ಸ್ವಾಮಿ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಪದಾಧಿಕಾರಿಗಳಾದ ಗಿರೀಶ್ ಬಿರಾದಾರ, ಮಹಾರುದ್ರ ಅಮದಲಪಾಡೆ, ರವಿ ಪಾಟೀಲ, ಅನಿಲ್ ರೆಡ್ಡಿ ಮತ್ತಿತರರು ಇದ್ದರು.
ಅಕ್ಟೋಬರ್ ಅಂತ್ಯದೊಳಗೆ ಬೀದರನ ಎಲ್ಲ ನಾಮಫಲಕಗಳು ಕನ್ನಡಮಯವಾಗಬೇಕು. ಇಲ್ಲವಾದಲ್ಲಿ ನವೆಂಬರ್ ಮೊದಲ ವಾರದಲ್ಲಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಲಾಗುವುದು.
ಗಣೇಶ ಪಾಟೀಲ ಜ್ಯಾಂತಿ
ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ























