Home ಜಿಲ್ಲೆ ಕಿರಿಯ ಸಹಾಯಕ ಎಂಜಿನಿಯರ್‌ಗಳ ವರ್ಗಾವಣೆಗೆ ಒತ್ತಾಯ

ಕಿರಿಯ ಸಹಾಯಕ ಎಂಜಿನಿಯರ್‌ಗಳ ವರ್ಗಾವಣೆಗೆ ಒತ್ತಾಯ

ಬೀದರ್À:ಮೇ.೧೪: ಲೋಕೋಪಯೋಗಿ ಇಲಾಖೆಯ ಬೀದರ್ ವಿಭಾಗ ಹಾಗೂ ಉಪ ವಿಭಾಗದ ಕಿರಿಯ ಸಹಾಯಕ ಎಂಜಿನಿಯರ್‌ಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಕಾAತ ವಜುರೆ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಲೋಕೋಪಯೋಗಿ ಇಲಾಖೆಯ ಬೀದರ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಎರಡೂ ವಿಭಾಗದಲ್ಲಿ ಅನೇಕ ಕಿರಿಯ ಸಹಾಯಕ ಎಂಜಿನಿಯರ್‌ಗಳು ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಹೀಗಾಗಿ ಅವರನ್ನು ವರ್ಗಾಯಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.