ರೈತರ ನೆರವಿಗೆ ಧಾವಿಸಲು ಆಗ್ರಹ

ಹುಬ್ಬಳ್ಳಿ, ಜೂ13: ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ಹಲವಾರು ಜಿಲ್ಲೆಗಳು ಸೇರಿದಂತೆ ಅದರಲ್ಲೂ ಧಾರವಾಡ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾಗೂ ಮನೆಗಳು ಹಾನಿಗೊಳಗಾಗಿದ್ದು ಬೆಣ್ಣೆ ಹಳ್ಳ ಜಲಾನಯನ ಪ್ರದೇಶ ಸಂಪೂರ್ಣವಾಗಿ ಜಲಾವೃತವಾಗಿದ್ದು ಸಾಲ ಸೂಲ ಮಾಡಿ ಮುಂಗಾರು ಬಿತ್ತನೆ ಮಾಡಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿಪತ್ತು ನಿಧಿಯಿಂದ ತಕ್ಷಣ ಹಾನಿಗೊಳಗಾದ ಆಸ್ತಿಪಾಸ್ತಿಗಳಿಗೆ ರೈತರಿಗೆ ಜನತೆಗೆ ಆರ್ಥಿಕ ಅನುಕೂಲತೆಗಳನ್ನು ಮಾಡಬೇಕು. ಮಳೆಯಿಂದಾಗಿ ಸಾಂಕ್ರಾಮಿಕ ರೋಗ ರುಜೀನಗಳು ಹರಡದಂತೆ ಆರೋಗ್ಯ ಇಲಾಖೆಯವರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕುಗಳು ತಕ್ಷಣ ಮುಂಗಾರು ಬಿತ್ತನೆ ಬೀಜ ಗೊಬ್ಬರ ಖರೀದಿ ಮಾಡಲು ಬೆಳೆ ಸಾಲ ನೀಡಬೇಕೆಂದು ನವಲಗುಂದ ಬಿಜೆಪಿ ಮುಖಂಡರು ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ದೇವರಾಜ.ಬ.ದಾಡಿಬಾವಿ ರವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.