Home ಜಿಲ್ಲೆ ತುಮಕೂರು ಕೆಎಚ್‌ಎಂಗೆ ಡಿಸಿಎಂ ಹುದ್ದೆ ನೀಡಲು ಒತ್ತಾಯ

ಕೆಎಚ್‌ಎಂಗೆ ಡಿಸಿಎಂ ಹುದ್ದೆ ನೀಡಲು ಒತ್ತಾಯ

ಮಧುಗಿರಿ, ಜೂ. ೧- ಮಾದಾರ ಮಹಾಸಭಾ ರಾಜ್ಯಾಧ್ಯಕ್ಷರಾದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಂತೆ ಮಧುಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾದರ ಮಹಾಸಭಾ ತಾಲ್ಲೂಕು ಅಧ್ಯಕ್ಷ ಎನ್. ಗೋಪಾಲಯ್ಯ ಆಗ್ರಹಿಸಿದ್ದಾರೆ.


ಕೆ. ಎಚ್. ಮುನಿಯಪ್ಪ ರವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಆಹಾರ ಸಚಿವರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಮಾದರ ಮಹಾಸಭಾವನ್ನು ಕಟ್ಟಿ ಜನಾಂಗವನ್ನು ಸಂಘಟನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ೪೦ ಲಕ್ಷ ಮಂದಿ ಮಾದಿಗ ಜನಾಂಗಕ್ಕೆ ಸೇರಿದವರಿದ್ದು ಒಟ್ಟು ಜನಸಂಖ್ಯೆಯಲ್ಲಿ ಶೇ. ೬ ರಿಂದ ೭ ರಷ್ಟು ಮಾದಿಗ ಜನಾಂಗದವರಿದ್ದು ಬಹುಸಂಖ್ಯಾತ ಮಾದಿಗ ಜನಾಂಗ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದು ನಮ್ಮ ಜನಾಂಗಕ್ಕೆ ಇದುವರೆಗೂ ಕಾಂಗ್ರೆಸ್ ಪಕ್ಷದಿಂದ ಉನ್ನತ ಮಟ್ಟದ ರಾಜಕೀಯ ಅಧಿಕಾರ ನೀಡಿಲ್ಲ.

ಆದ್ದರಿಂದ ಪ್ರಸ್ತುತ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಕೆ ಎಚ್ ಮುನಿಯಪ್ಪ ರವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಿಸುವಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಡಿ.ಕೆ. ಶಿವಕುಮಾರ್, ಸಿದ್ಧರಾಮಯ್ಯ ರವರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಅವರನ್ನು ನೇಮಕ ಮಾಡುವುದರ ಮೂಲಕ ಮಾದಿಗ ಜನಾಂಗಕ್ಕೆ ನ್ಯಾಯ ದೊರಕಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.