Home ಜಿಲ್ಲೆ ಬೆಂಗಳೂರು ಸಚಿವ ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ಸಚಿವ ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ವಿಜಯಪುರ.ಮೇ೨೯: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.


ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ವಿಜಯಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನ್ನೂರು ವೆಂಕಟೇಶ್, ರಾಜ್ಯ ಸರ್ಕಾರದಲ್ಲಿ ಆಹಾರ ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಅವರ ಕೊಡುಗೆ ಕಾಂಗ್ರಸ್ ಪಕ್ಷಕ್ಕೆ ಹೆಚ್ಚಾಗಿದ್ದು, ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಉನ್ನತ ಸ್ಥಾನಮಾನ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಕಟ್ಟಾಳು ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರು ಏಳು ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನ ನೀಡುವ ಅರ್ಹತೆಯನ್ನು ಅವರು ಹೊಂದಿದ್ದಾರೆ ಎಂದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಸಚಿವ ಮುನಿಯಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕರೆ, ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗಲಿವೆ. ಅಲ್ಲದೇ ಜಿಲ್ಲೆಯ ಕೀರ್ತಿ ಹೆಚ್ಚಲಿದೆ ಎಂದು ಹೇಳಿದ್ದಾರೆ.


ಸಾಮಾಜಿಕ ನ್ಯಾಯದ ಪರವಾಗಿ ಧ್ವನಿಯಾಗಿರುವ ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಪರಿಗಣಿಸಿ ಮುನಿಯಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೇಮಿಸಿ, ಪ್ರಬಲ ಖಾತೆಯನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.