
ಬೀದರ್: ರಾಜ್ಯದಲ್ಲಿ ಕಾನೂನಿನ ಆಳ್ವಿಕೆ, ಸಂವಿಧಾನಬದ್ಧ ಹಕ್ಕುಗಳು ಹಾಗೂ ನಾಗರಿಕರ ಜೀವ ಮತ್ತು ಸ್ವಾತಂತ್ರ‍್ಯದ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತು ಮಧ್ಯಪ್ರವೇಶ ಮಾಡಬೇಕು. ಅವರ ಆರೋಗ್ಯದ ದೃಷ್ಟಿಯಿಂದ ಸ್ವತಂತ್ರ ವೈದ್ಯಕೀಯ ತಂಡದಿAದ ತಕ್ಷಣ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ಹಾಗೂ ಜೀವ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣಕ್ಕೆ ಸಂಬAಧಿಸಿದAತೆ ಪುನೀತ್ ಕೆರೆಹಳ್ಳಿ ಹಾಗೂ ಅವರ ಸಹಚರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಘಟನೆಗೆ ಸಂಬAಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿ, ಸಾಕ್ಷ್ಯ ನಾಶಕ್ಕೆ ಯತ್ನಿಸಿದವರು ಹಾಗೂ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.
ಇದೇ ವೇಳೆ ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಭರತ್ ಕುಂಡ್ಮೇಲ್ ಸೇರಿದಂತೆ ಕೆಲವರ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮ ಹಾಗೂ ವಿವಿಧೆಡೆ ಹಿಂದೂ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಗಡಿಪಾರು ಮತ್ತು ಗುಂಡಾ ಕಾಯಿದೆ ನೋಟಿಸ್‌ಗಳ ಕುರಿತು ಸ್ವತಂತ್ರ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೀಡಿರುವ ವಿಚಾರಣಾ ನೋಟಿಸ್ ಸೇರಿದಂತೆ ಹಿಂದೂ ಕಾರ್ಯಕರ್ತರ ವಿರುದ್ಧದ ಕ್ರಮಗಳಲ್ಲಿ ಕಾನೂನು ದುರುಪಯೋಗವಾಗದಂತೆ ಉನ್ನತ ಮಟ್ಟದ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಬೀದರ್ ಸಂಯೋಜಕ ಶ್ರೀಕಾಂತ್ ಮೋದಿ, ಸಹ ಸಂಯೋಜಕ ಗೋಪಾಲಕೃಷ್ಣನ್ ಕುಕ್ದಳ್, ಹಿಂದೂ ಜಾಗರಣ ಸಮನ್ವಯ ಸಮಿತಿ ಸಂಚಾಲಕ ಡಾ. ಆರ್.ಕೆ. ಚಾರಿ, ವಿಜಯಲಕ್ಷ್ಮೀ ಆರ್. ಚಾರಿ, ರಾಷ್ಟ್ರ ಸೇವಿಕಾ ಸಮಿತಿ ಕಾರ್ಯಕರ್ತೆ ಹೇಮಲತಾ ಜೋಶಿ, ರೇಖಾ ಸಾಳಿ, ಪ್ರೇಮಲತಾ ಹಾಗೂ ಗೋರಕ್ಷಾ ಚಟುವಟಿಕೆಗಳ ಉತ್ತರ ಪ್ರಾಂತ ಕರ್ನಾಟಕ ಸದಸ್ಯ ಚನ್ನಬಸವಂತ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.























