
ಕಲಬುರಗಿ,ಅ.16-ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕ ಹಾಕಿರುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ದಲಿತಿ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಅವರು ಬೆಂಗಳೂರಿನಲ್ಲಿ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷರಿಗೆ ಮನವಿ ಪತ್ರ ಸಲ್ಲಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ರವರು ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗ ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ಅನುದಾನಿತ ಶಾಲೆಗಳ ಆಟದ ಮೈದಾನದಲ್ಲಿ ಸರ್ಕಾರಿ ಹಾಗೂ ಮುಜರಾಯಿ ಇಲಾಖೆಯ ಸ್ಥಳಗಳಲ್ಲಿ ಆರ್.ಎಸ್.ಎಸ್.ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿಷೇದಿಸಬೇಕೆಂದು ಪತ್ರವನ್ನು ಬರೆದಿದ್ದು, ಈ ಸಂಘಟನೆಯನ್ನು ನಿಷೇದಿಸಬೇಕೆಂದು ಹೇಳಿದ್ದಾರೆಂದು ಸುಳ್ಳು ಪ್ರಚಾರ ಮಾಡಿ ರಾಜ್ಯದಲ್ಲಿ ಅಶಾಂತಿ ವಾತವರಣ ನಿರ್ಮಾಣ ಮಾಡಲಾಗುತ್ತಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಕೆಲವರು ದೂರವಾಣಿ ಮುಖಾಂತರ ಮಾತನಾಡಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವುದು ತೀವ್ರ ಖಂಡನೀಂiÀiವಾಗಿದೆ. ಬಿ.ಜೆ.ಪಿ. ಹಾಗೂ ಆರ್.ಎಸ್.ಎಸ್.ಆರ್.ಎಸ್.ಎಸ್.ಸಂಘಟನೆಯವರು ಉದ್ದೇಶಪೂರ್ವಕವಾಗಿ ಕೊಲೆ ಬೆದರಿಕೆ ಹಾಕುತ್ತಿದ್ದು, ಪ್ರಿಯಾಂಕ್ ಖರ್ಗೆ ರವರು ಸಂವಿಧಾನ ಬದ್ದವಾಗಿ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ರವರಿಗೆ ಹಾಗೂ ಅವರ ಕುಟುಂಬದ ಮಹಿಳಾ ಸದಸ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವ ಆರ್.ಎಸ್.ಎಸ್.ಗುಂಡಗಳ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂದಿಸಬೇಕು ಹಾಗೂ ಸಚಿವರಿಗೆ ಕೊಲೆ ಬೆದರಿಕೆ ಹಾಕಿರುವುದರಿಂದ ಸೂಕ್ತ ಪೆÇಲೀಸ್ ರಕ್ಷಣೆ ನೀಡಬೇಕೆಂದು ಅವರು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ರಾಜು ಶಿವನೂರ್, ದಿನೇಶ್ ಮೂಘಾ, ಆರ್.ತಿಮ್ಮಾರೆಡ್ಡಿ ,ಸುಭಾಷ್ ಕೋರ, ಜಗದೇವಪ್ಪ ಅಂಕಲಗಿ, ಭೀಮಾ ಶಂಕರ್ ದಂಡೆ, ಭೀಮಶ್ಯಾ ದೊರೆ. ಮಹೇಶ್ ಕಲಗುರ್ತಿ, ಮಾಣಿಕನಾಥ್ ಅಲ್ಪ , ಅರ್ಜುನ್ ರಾಥೋಡ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.