ನಿಧನ

ಬೆಂಗಳೂರು, ಅ. ೧೯- ಮೊದಲಿಯಾರ್ ಸಂಘದ ಕಾರ್ಯದರ್ಶಿ ಎ.ಎಸ್. ಲಕ್ಷ್ಮಣ್ ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೃತರ ಪಾರ್ಥೀವ ಶರೀರವನ್ನು ಮಲ್ಲೇಶ್ವರಂನ ವೆಸ್ಟ್ ಪಾರ್ಕ್ ಅಪಾರ್ಟ್‌ಮೆಂಟ್ಸ್‌ನಲ್ಲಿ ಇಡಲಾಗಿದ್ದು, ಮೃತರ ಅಂತ್ಯಕ್ರಿಯೆ ನಾಳೆ ನಗರದಲ್ಲಿ ನೆರವೇರಲಿದೆ. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ, ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಸಂಘದ ಪದಾಧಿಕಾರಿಗಳು ಪ್ರಾರ್ಥಿಸಿದ್ದಾರೆ.