Home ಜಿಲ್ಲೆ ಕಲಬುರಗಿ ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಕಲಬುರಗಿ : ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಮಂಗಳವಾರ ಜರುಗಿದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಯಲ್ಲಿ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ವಾಚಿಸಿ, ನಂತರ ಮಾನವ ಸರಪಳಿಯನ್ನು ರಚಿಸಿ, ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ್, ಉಪನ್ಯಾಸಕರಾದ ನಯಿಮಾ ನಾಹಿದ್, ಮಲ್ಲಪ್ಪ ರಂಜಣಗಿ, ಗ್ರಂಥಪಾಲಕ ಲಿಂಗರಾಜ ಹಿರೇಗೌಡ, ಅತಿಥಿ ಉಪನ್ಯಾಸಕರಾದ ಅಬ್ದುಲ್ ಸಮದ್, ಸ್ವಾತಿ, ರುಕ್ಸಾನಾ,ದೇವಪ್ಪ, ಶಿಕ್ಷಣ ಪ್ರೇಮಿ ಬಸವರಾಜ ಹಡಪದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.