ಮಳೆ ಹಾನಿ ಪ್ರದೇಶದ ಮೂಲಭೂತ ಸೌಕರ್ಯ ತ್ವರಿತವಾಗಿ ಕಲ್ಪಿಸಲು ಜಿಲ್ಲಾಧಿಕಾರಿ ಡಾ.ಆನಂದ ಅಧಿಕಾರಿಗಳಿಗೆ ಸೂಚನೆ

ಸಂಜೆವಾಣಿ ವಾರ್ತೆ
ವಿಜಯಪುರ, ಅ. ೪: ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರುದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಹಾನಿಗೀಡಾದ ಕಟ್ಟಡಗಳ ಸಮೀಕ್ಷೆ ಕಾರ್ಯ ಕೈಗೊಂಡು ಜಿ.ಪಿ.ಎಸ್ ಪೋಟೊ ಸಮೇತ ವರದಿ ಸಲ್ಲಿಸಬೇಕು. ಚೆಕ್ ಡ್ಯಾಮ್‌ಗಳು, ಸಣ್ಣ ಸಣ್ಣ ಬಾಂದಾರಗಳು, ಕೆರೆ ಕಟ್ಟೆಗಳ ದುರಸ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಹಾನಿಗೀಡಾದ ಮೂಲಭೂತ ಸೌಕರ್ಯಗಳನ್ನು ತ್ವರಿತ ಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಪ್ರವಾಹದಿಂದ ತೊಂದರೆಗೊಳಗಾದ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಅಂದಾಜು ೨ಲಕ್ಷದ ೪೫ ಸಾವಿರ ಹೆಕ್ಟೆರೆಯಷ್ಟು ಬೆಳಹಾನಿದೆ ಅಂದಾಜಿಸಲಾಗಿದೆ.
ಸAಬAಧಿಸಿದ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ಕೈಗೊಂಡು ನಿಖರವಾದ ಬೆಳೆ ಹಾನಿಯ ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಜಿಲ್ಲೆಯ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ನಗರಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಕಾರ್ಯ ಕೈಗೊಂಡು ೩೦ಕ್ಕಿಂತ ಹೆಚ್ಚು ಪ್ರತಿಶತ ಹಾನಿಗೊಳಗಾದ ಮನೆಗಳನ್ನು ಗುರುತಿಸಿ, ಜಿ.ಪಿ.ಎಸ್ ಪೋಟೊ ಸಮೇತ ನಿಖರವಾದ ಮಾಹಿತಿ ನೀಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದAತತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಿಳಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಪಶು ಸಂಗೋಪನ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ ಗುಣಾರಿ, ಜಂಟಿ ಕೃಷಿ ನಿದೇಶಕ ಶಿವನಗೌಡ ಪಾಟೀಲ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಕುಮಾರ ಬಾವಿದೊಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.