
ಯಾದಗಿರಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಶುಕ್ರವಾರ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗಳು, ಮೂಲಸೌಕರ್ಯ ಹಾಗೂ ರೋಗಿಗಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
ಗರ್ಭಿಣಿಯರು ಹಾಗೂ ನವಜಾತ ಶಿಶುಗಳಿಗೆ ಗುಣಮಟ್ಟದ ಮತ್ತು ಸಮಯೋಚಿತ ಆರೋಗ್ಯ ಸೇವೆ ದೊರೆಯುವಂತೆ ಆಸ್ಪತ್ರೆಯ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಸೇವೆ ಒದಗಿಸಲು ಹೊಸ ಹೆರಿಗೆ ಕೊಠಡಿ, ನವಜಾತ ಶಿಶುಗಳ ವಿಶೇಷ ಆರೈಕೆಗಾಗಿ Sಠಿeಛಿiಚಿಟ ಓeತಿboಡಿಟಿ ಅಚಿಡಿe Uಟಿiಣ (SಓಅU) ಹಾಗೂ ಗಂಭೀರ ಸ್ಥಿತಿಯಲ್ಲಿರುವ ಮಕ್ಕಳಿಗೆ ತೀವ್ರ ನಿಗಾ ಚಿಕಿತ್ಸೆ ನೀಡಲು Pಚಿeಜiಚಿಣಡಿiಛಿ Iಟಿಣeಟಿsive ಅಚಿಡಿe Uಟಿiಣ (PIಅU) ಸ್ಥಾಪಿಸಲಾಗಿದೆ. ಹೊರರೋಗಿಗಳ ನೋಂದಣಿ ಹಾಗೂ ಸೇವೆಗಳನ್ನು ಸುಗಮಗೊಳಿಸಲು ಹೊಸ ಔPಆ ಕೌಂಟರ್‌ಗಳನ್ನು ಆರಂಭಿಸಲಾಗಿದೆ ಎಂದರು.
ಆಸ್ಪತ್ರೆಯ ಆವರಣದ ಒಂದು ಭಾಗದ ಚರಂಡಿ ವ್ಯವಸ್ಥೆಯನ್ನು ನವೀಕರಿಸುವ ಮೂಲಕ ಸ್ವಚ್ಛತೆ ಮತ್ತು ನೈರ್ಮಲ್ಯ ಸುಧಾರಿಸಲಾಗಿದೆ. ವಿದ್ಯುತ್ ವ್ಯತ್ಯಯದಿಂದ ತುರ್ತು ಆರೋಗ್ಯ ಸೇವೆಗಳಿಗೆ ಯಾವುದೇ ಅಡಚಣೆ ಉಂಟಾಗದAತೆ ಹೊಸ ಜನರೇಟರ್ ಅಳವಡಿಸಲಾಗಿದೆ ಎಂದು ವಿವರಿಸಿದರು.
ಆಸ್ಪತ್ರೆಯ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಉಳಿದ ಭಾಗದ ಚರಂಡಿ ನವೀಕರಣ, ಆಸ್ಪತ್ರೆ ಕಟ್ಟಡ ಮತ್ತು ಆವರಣದ ಸಮಗ್ರ ನಿರ್ವಹಣೆ, ಕುಡಿಯುವ ನೀರು ಹಾಗೂ ನೈರ್ಮಲ್ಯ ವ್ಯವಸ್ಥೆ ಸುಧಾರಣೆ, ಅಗತ್ಯ ವೈದ್ಯಕೀಯ ಉಪಕರಣಗಳ ಲಭ್ಯತೆ ಮತ್ತು ತಾಯಿ-ಮಕ್ಕಳಿಗೆ ಅನುಕೂಲಕರ ನಿರೀಕ್ಷಣಾ ಪ್ರದೇಶಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ, ವಿದ್ಯುತ್ ಸೇರಿದಂತೆ ಇತರೆ ತುರ್ತು ಮೂಲಸೌಕರ್ಯಗಳನ್ನು ಬಲಪಡಿಸುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಸ್ಪತ್ರೆಯಲ್ಲಿನ ಮಾನವ ಸಂಪನ್ಮೂಲದ ಅಗತ್ಯತೆ, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿಯ ಲಭ್ಯತೆ, ತುರ್ತು ಸೇವೆಗಳ ಸಾಮರ್ಥ್ಯ ಮತ್ತು ರೋಗಿಗಳ ಸೇವಾ ವ್ಯವಸ್ಥೆಯನ್ನೂ ಪರಿಶೀಲಿಸಿದ ಜಿಲ್ಲಾಧಿಕಾರಿ, ಅಗತ್ಯವಿರುವ ಕಡೆಗಳಲ್ಲಿ ಸಂಬAಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಆಸ್ಪತ್ರೆಯನ್ನು ಇನ್ನಷ್ಟು ಸುಸಜ್ಜಿತಗೊಳಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಆಡಳಿತದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದರು.





























