ಮೆದುಳಿನ ಅಸ್ವಸ್ಥತೆಗಳನ್ನು ಆರಂಭದಲ್ಲೇ ಪತ್ತೆ ಹಚ್ಚಿ


ಗದಗ,ಜ.೧೮: ಮೆದುಳಿನ ಅಸ್ವಸ್ಥತೆಗಳನ್ನು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದು ತುಂಬಾ ಅವಶ್ಯಕವಾಗಿದ್ದು ಯಾವುದೇ ನರಸಂಬAಧಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಜಿಲ್ಲಾ ಆಸ್ಪತ್ರೆಯಲ್ಲಿರುವ ಕರ್ನಾಟಕ ಮೆದುಳು ಉಪಕ್ರಮ ಚಿಕಿತ್ಸಾ ಕೇಂದ್ರದ ವೈದ್ಯರನ್ನು ನರರೋಗ ತಜ್ಞರನ್ನು ಸಂಪರ್ಕಿಸಬೇಕೆAದು ಜಿಲ್ಲಾ ಅಸಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ. ರಾಜೇಂದ್ರ ಸಿ ಬಸರಿಗಿಡದ ಅವರು ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಎಚ್ ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕ ಆರೋಗ್ಯ ಅಧಿಕಾರಿಗಳ ಸಭಾಭವನದಲ್ಲಿ ಜಿಲ್ಲೆಯ ಫಾರ್ಮಸಿಸ್ಟ್ ಅಧಿಕಾರಿಗಳಿಗೆ ಜರುಗಿದ ಕರ್ನಾಟಕ ಮೆದುಳು ಉಪಕ್ರಮ ಕುರಿತ ತರಬೇತಿ ಕಾರ್ಯಾಗಾರವನ್ನು ಸಸಿಗೆ ನೀರಿರುವ ಮೂಲಕ ಉದ್ಘಾಟಿಸಿ ಮೇಲಿನಂತೆ ಮಾತನಾಡಿದರು.


ಮುಂದುವರಿದು ಮಾತನಾಡಿದ ಅವರು ಸಾಮಾಜಿಕವಾಗಿ ಬೆರೆಯುವುದು ಮೆದುಳಿನ ಆರೋಗ್ಯಕ್ಕೆ ಉತ್ತಮವಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮೆದುಳಿನ ಆರೋಗ್ಯ ವೃದ್ಧಿಸುತ್ತದೆ ವ್ಯಾಯಾಮವು ಜ್ಞಾಪಕ ಶಕ್ತಿ ಮತ್ತು ಅರಿವನ್ನು ಸುಧಾರಿಸುತ್ತದೆ ದೈಹಿಕ ಚಟುವಟಿಕೆಗಳು ಜ್ಞಾಪನ ಶಕ್ತಿಯನ್ನು ಹೆಚ್ಚಿಸುತ್ತವೆ . ಅರಿವನ್ನು ಚುರುಕುಗೊಳಿಸುವುದರಿಂದ ಮೆದುಳಿನ ಆರೋಗ್ಯ ಸುಧಾರಣೆ ಮಾಡಿಕೊಳ್ಳಬಹುದು ಹೇಳಿದರು.


ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಆರೋಗ್ಯ ಇಲಾಖೆಯ ಜಿಲ್ಲಾ ಯೋಜನಾ ಧಿಕಾರಿ ಗಳಾದ ಡಾ. ವೈ ಕೆ ಭಜಂತ್ರಿಯವರು ಮಾತನಾಡಿ ಇಂದು ಮಕ್ಕಳು ಸೇರಿದಂತೆ ಪ್ರತಿಯೊಬ್ಬರು ಒತ್ತಡದಿಂದ ಬಳಲುತ್ತಿದ್ದಾರೆ ದೈನಂದಿನ ಚಟುವಟಿಕೆಗಳಲ್ಲಿ ಧ್ಯಾನ ಯೋಗ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸ್ವಾಸ್ಥ÷್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಕರ್ನಾಟಕ ಮೆದುಳು ಉಪಕ್ರಮ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ಪ್ರವೀಣ ರೋಣದ ಅವರು ಮಾತನಾಡಿ ತರಬೇತಿಯಲ್ಲಿ ಪಡೆದ ಜ್ಞಾನವನ್ನು ಆಶಾ ಕಾರ್ಯಕರ್ತೆಯರು ತಮ್ಮ ದಿನನಿತ್ಯದ ಆರೋಗ್ಯ ಸೇವೆಯಲ್ಲಿ ಉಪಯೋಗಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊAಡರು.


ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಅಶ್ವಿನಿ ಕುರಿಯವರ ಹಾಗೂ ರವಿ ನಂದಿಹಾಳ ಅವರು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕುರಿತು ತರಬೇತಿಯನ್ನು ಶ್ರೀ ಶ್ರೀಧರ್ ಅವರು ಮಾನಸಿಕ ಆರೋಗ್ಯ ಕುರಿತು ತರಬೇತಿ ನೀಡಿದರು.