Home ಜಿಲ್ಲೆ ಕಲಬುರಗಿ ಮಾ. 23 ರಂದು ದೇವರ ದಾಸಿಮಯ್ಯ ಜಯಂತಿ

ಮಾ. 23 ರಂದು ದೇವರ ದಾಸಿಮಯ್ಯ ಜಯಂತಿ

ಕಲಬುರಗಿ, ಮಾ,18: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೇವರ ದಾಸಿಮಯ್ಯ ಜಯಂತಿಯನ್ನು ಇದೇ ಮಾರ್ಚ 23 ರಂದು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಶಿವಪ್ರಭು ಹಿರೇಮಠ ಅವರು ಹೇಳಿದರು.
ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಇದೇ ಮಾರ್ಚ 23 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಸಭೆಯಲ್ಲಿ ನುರಿತ ಉಪನ್ಯಾಸಕರನ್ನು ಸಹ ಆಹ್ವಾನಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಂತಕುಮಾರ ರಾಜಶೇಖರ ಯಳಸಂಗಿ ಜಯಂತಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರಿ ನಾಶಿ ಅವರು ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ನಾಡಗೀತೆ, ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಡಿವಾಳಪ್ಪ ಎಸ್ ಹುಲ್ಲೂರ, ಸೂರ್ಯಕಾಂತ ಸೊನ್ನದ, ಶಿವಶಂಕರ್, ಪ್ರಕಾಶ್, ಗೀತಾಂಜಲಿ , ಮಯೂರಿ, ಸ್ವಾತಿ, ಶಾಂತಕುಮಾರ ಹಾಗೂ ಪ್ರದೀಪ ಇತರರು ಉಪಸ್ಥಿತರಿದ್ದರು.