Home ಜಿಲ್ಲೆ ಕೋಟೆ, ಪಾಪನಾಶ ದೇವಸ್ಥಾನ ಅಭಿವೃದ್ಧಿಯಿಂದ ಜಿಲ್ಲೆಯ ಆರ್ಥಿಕತೆಗೆ ಉತ್ತೇಜನ: ಸಚಿವ ಈಶ್ವರ ಖಂಡ್ರೆ

ಕೋಟೆ, ಪಾಪನಾಶ ದೇವಸ್ಥಾನ ಅಭಿವೃದ್ಧಿಯಿಂದ ಜಿಲ್ಲೆಯ ಆರ್ಥಿಕತೆಗೆ ಉತ್ತೇಜನ: ಸಚಿವ ಈಶ್ವರ ಖಂಡ್ರೆ

ಬೀದರ್ ಸೆ 18 : ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶಿ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್ ಡೆವಲಪ್‍ಮೆಂಟ್’ ಅಡಿಯಲ್ಲಿ 25 ಕೋಟಿ ವೆಚ್ಚದಲ್ಲಿ ನಗರದ ಐತಿಹಾಸಿಕ ಕೋಟೆ ಹಾಗೂ ಪಾಪನಾಶ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಜಿಲ್ಲೆಯ ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.
ಗುರುವಾರ ನಗರದ ಕೋಟೆ ಆವರಣದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಸ್ವದೇಶ ದರ್ಶನ 2.0 ಯೋಜನೆಯಡಿ ಬೀದರ ಕೋಟೆ ಮತ್ತು ಪಾಪನಾಶ ಕೆರೆ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೀದರ್ ಕೋಟೆ ಹಾಗೂ ಪಾಪನಾಶ ದೇವಾಲಯಗಳು ಅಪಾರ ಐತಿಹಾಸಿಕ ಮತ್ತು ಸಾಂಸ್ಕøತಿಕ ಮಹತ್ವ ಹೊಂದಿದ್ದು, ಈ ಪಾರಂಪರಿಕ ತಾಣಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕೋಟೆ ಅಭಿವೃದ್ಧಿಯಿಂದ ಹೊರರಾಜ್ಯಗಳ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದ್ದು, ಸ್ಥಳೀಯ ಯುವಕರಿಗೆ ಪ್ರವಾಸಿ ಮಾರ್ಗದರ್ಶಿ (ಗೈಡ್) ತರಬೇತಿ ನೀಡಿ ಉದ್ಯೋಗ ಕಲ್ಪಿಸಲಾಗುವುದು. ಜೊತೆಗೆ ಹೋಟೆಲ್, ಸಾರಿಗೆ ಹಾಗೂ ಸ್ಥಳೀಯ ವ್ಯಾಪಾರ-ವಹಿವಾಟು ವೃದ್ಧಿಸಿ ಜಿಲ್ಲೆ ಆರ್ಥಿಕವಾಗಿ ಸಬಲಗೊಳ್ಳಲಿದೆ ಎಂದರು.
ಲೋಕಸಭಾ ಸದಸ್ಯ ಸಾಗರ ಈ. ಖಂಡ್ರೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಪ್ರವಾಸಿ ತಾಣಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಆದ್ಯತೆ ನೀಡಲಾಗುತ್ತಿದೆ. ಯೋಜನೆಯಡಿ ಕೋಟೆಯಲ್ಲಿ ಹಿರಿಯ ನಾಗರಿಕರಿಗೆ ಇವಿ ಬಗಿ ಶಟಲ್, ಹೆರಿಟೇಜ್ ವಾಕ್, ಪ್ರವಾಸಿ ಮಾಹಿತಿ ಕೇಂದ್ರ, ಆಕರ್ಷಕ ದೀಪಾಲಂಕಾರ, ಸೈಕಲ್ ಹಾಗೂ ಫಾರೆಸ್ಟ್ ಟ್ರೇಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಅದೇ ರೀತಿ ಪಾಪನಾಶ ಕೆರೆ ಆವರಣದಲ್ಲಿ ಪ್ರವೇಶ ದ್ವಾರ, ಜಿಪ್‍ಲೈನ್, ರೋಪ್ ಕೋರ್ಸ್, ಬೋಟಿಂಗ್ ಜಟ್ಟಿ ಹಾಗೂ ಮಕ್ಕಳ ಆಟದ ಮೈದಾನ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ವೆಬ್‍ಸೈಟ್ ಹಾಗೂ ಡಿಜಿಟಲ್ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೀದರ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರು ಮಾತನಾಡಿ, ಬೀದರ್ ಕೋಟೆ ಹಾಗೂ ಚೌಖಂಡಿಯಂತಹ ಸ್ಮಾರಕಗಳಿಗೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮಥ್ರ್ಯವಿದ್ದು, ಬಿಡುಗಡೆಯಾದ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಬೀದರ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಬೀದರ್ ಕೋಟೆ ಹಾಗೂ ಚೌಖಂಡಿಯಂತಹ ಸ್ಮಾರಕಗಳಿಗೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮಥ್ರ್ಯವಿದ್ದು, ಬಿಡುಗಡೆಯಾದ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮತ್ತೊಬ್ಬ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಪ್ರಸಾದ್-2’ ಯೋಜನೆಯಡಿ ಪಾಪನಾಶ ದೇವಾಲಯ ಅಭಿವೃದ್ಧಿಗೆ ಅನುದಾನ ಸಿಕ್ಕಿದ್ದು, ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲೂ ಇಕೋ ಟೂರಿಸಂಗೆ ಉತ್ತೇಜನ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಅಪ್ಪೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಗಿರೀಶ್ ಮಾಧವ್ ಗಿತ್ತೆ, ಸಹಾಯಕ ಆಯುಕ್ತ ಅಭಿನವ್ ಜೈನ್, ಮಹಾನಗರ ಪಾಲಿಕೆ ಸದಸ್ಯ ಇರ್ಶಾದ್ ಪೈಲ್ವಾನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.