Home ಜಿಲ್ಲೆ ಕಲಬುರಗಿ ಕೇರಳದ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ದೇವೇಂದ್ರಪ್ಪ ಅವಂಟಿ

ಕೇರಳದ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ದೇವೇಂದ್ರಪ್ಪ ಅವಂಟಿ

ಕಲಬುರಗಿ: ಮೂರು ದಶಕಗಳ ಅಧಿಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ದೇವೇಂದ್ರಪ್ಪ ಅವಂಟಿಯವರಿಗೆ ಪ್ರತಿಷ್ಠಿತ ಕೇರಳ ರಾಜ್ಯದ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೊಡಮಾಡುವ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಸ್ಮರಣಿಕೆ ಹೊಂದಿರುತ್ತದೆ. 2026 ನೇ ಮೇ 16 ರಂದು ಕಾಸರಗೋಡು ಜಿಲ್ಲೆಯ, ಸುಬ್ಬಯ್ಯಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕೆ.ಯು.ಡಬ್ಲ್ಯೂ.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರ ರುದ್ರಪ್ಪ ಲಮಾಣಿ ಸಚಿವ ಎನ್.ಎಸ್. ಬೋಸರಾಜ್, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮುಂತಾದ ಗಣ್ಯರು ಸೇರಿ ಪ್ರಶಸ್ತಿ ಪ್ರಧಾನ ಮಾಡುವರು.
ಕಳೆದ ಸುಮಾರು 2 ದಶಕಗಳ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ತನ್ನ ಸೇವೆಯ ಮೂಲಕ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕøತಿ, ಕಲೆಗಳ ಉಳಿವಿಗಾಗಿ ಇತರ ಕನ್ನಡಪರ ಸಂಘ ಸಂಸ್ಥೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಕನ್ನಡ ಮತ್ತು ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಈ ಸಂಘವು ಕಾರ್ಯಾಚರಿಸುತ್ತಿದೆ.
ಸಂಘವು ವಾರ್ಷಿಕವಾಗಿ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನಿಸುತ್ತಿದ್ದು, ಈ ಬಾರಿಯ ಕಲಾಪೆÇೀಷಕ ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಎಸ್. ನಾಸಿ ಪ್ರಾಯೋಜಕತ್ವದ ಸಂಸ್ಥೆಯು ನೀಡುವ ದತ್ತಿನಿಧಿ ಪ್ರಶಸ್ತಿಗೆ ದೇವೇಂದ್ರಪ್ಪ ಆವಂಟಿಯವರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.