ಕೆಲಸ ನೀಡಲು ಆಗ್ರಹಿಸಿ ಧರಣಿ ಸತ್ಯಾಗ್ರಹ

ಕಲಬುರಗಿ,ಜ.27-ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಶ್ರೀಚಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹೊಡಲ ಗ್ರಾಮದ ಬಡ ಕೂಲಿಕಾರರು ಕೆಲಸವಿಲ್ಲದೆ ವಲಸೆ ಹೋಗುವ ಸ್ಥಿತಿ ಬಂದಿದ್ದು, ಕೂಡಲೇ ಕೆಲಸ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕೆಲಸ ಒದಗಿಸದಿದ್ದರೆ ಬಡ ಕುಟುಂಬಗಳು ಹೊಟ್ಟೆಪಾಡಿಗಾಗಿ ವಲಸೆ ಹೋಗುವುದ ಖಚಿತ. ಈ ಕಾರಣಕ್ಕಾಗಿ ಕೂಡಲೇ ಫಾರಂ.ನಂ.6 ತೆಗೆದುಕೊಂಡು ವಾರದೊಳಗೆ ಕೆಲಸ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಧರಣಿ ಸತ್ಯಾಗ್ರಹದ ನಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷೆ ಜಯಶ್ರೀ ಎಂ.ಕಟ್ಟಿಮನಿ, ತಾಲ್ಲೂಕ ಅಧ್ಯಕ್ಷ ಮಲ್ಲಪ್ಪ ಮುನ್ನಳ್ಳಿ, ಉಪಾಧ್ಯಕ್ಷೆ ಸಾವಿತ್ರಿ ಲಕ್ಷ್ಮಣ, ಹೊಡಲ ಗ್ರಾಮ ಘಟಕದ ಅಧ್ಯಕ್ಷ ಶ್ರೀಪತಿ ಹೊಡಲ, ಕಾರ್ಯದರ್ಶಿ ಈಟಾಬಾಯಿ ಸೇರಿದಂತೆ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.