ಪಾವಗಡ, ಸೆ. ೧೭- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ರೀತಿಯ ಕೆಲಸಗಳನ್ನು ಮಾಡುತ್ತಿದ್ದು, ನಮ್ಮ ಗ್ರಾಮಕ್ಕೆ ಕೆರೆಯ ಊಳು ತೆಗೆಸಿಕೊಟ್ಟಿದ್ದು ತುಂಬಾ ಅನುಕೂಲವಾಗಿದೆ ಎಂದು ಶ್ರೀನಿವಾಸರೆಡ್ಡಿ ಹೇಳಿದರು.
ತಾಲ್ಲೂಕಿನ ಲಿಂಗದಹಳ್ಳಿ ವಲಯದ ಪೋಲೆನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು- ನಮ್ಮ ಕೆರೆಗೆ ಬಾಗಿನ ಅರ್ಪಣೆ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಸುಮಾರು ೧೦೦೦ ಕೆರೆಗಳ ಪುನಶ್ಚೇತನ ಮಾಡಿದ್ದು, ರೈತರಿಗೆ ದನ ಕರುಗಳಿಗೆ ಅಕ್ಕಪಕ್ಕದ ಬೋರ್‌ವೆಲ್‌ಗಳಿಗೆ ಉತ್ತಮವಾದ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ತಾಲ್ಲೂಕು ಯೋಜನಾಧಿಕಾರಿ ಮಹೇಶ್ ಮಾತನಾಡಿ, ಪಾವಗಡ ತಾಲೂಕಿನಲ್ಲಿ ೩೨೬ ವಿದ್ಯಾರ್ಥಿಗಳಿಗೆ ಸುಜ್ಞಾನಿಧಿ ಶಿಷ್ಯವೇತನ ಹಾಗೂ ೨೦ ಆಯ್ದ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರು ನೀಡಲಾಗಿದೆ. ಹಾಗೂ ೧೨೩ ನಿರ್ಗತಿಕರ ಮಾಶಾಸನ ಮತ್ತು ತಾಲ್ಲೂಕಿನಲ್ಲಿ ಏಳು ಶಾಲೆಗಳಿಗೆ ಬೆಂಚು, ಡೆಸ್ಕ್, ಬೇಡಿಕೆ ಬಂದಿದೆ.ಮ ೦೫ ಶುದ್ಧಗಂಗಾ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಇನ್ನು ಅನೇಕ ರೀತಿಯ ಕಾರ್ಯಕ್ರಮವನ್ನು ಮಾಡುತ್ತಿದ್ದು. ಇದುವರೆಗೆ ಪಾವಗಡ ತಾಲ್ಲೂಕಿನಲ್ಲಿ ಒಟ್ಟು ೭ ಕೆರೆಗಳ ಕಾಮಗಾರಿ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಾಸಲಕುಂಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಾಧರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಿರಂಜನ್ ರೆಡ್ಡಿ, ಸಮಿತಿಯ ಉಪಾಧ್ಯಕ್ಷರಾದ ಚಂದ್ರಮೌಳಿ ಮತ್ತಿತರರು ಉಪಸ್ಥಿತರಿದ್ದರು.


























