Home ಜಿಲ್ಲೆ ಬೆಂಗಳೂರು ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆದ್ಯತೆ

ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆದ್ಯತೆ

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; motionR: 0; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 279.0899;aec_lux_index: 0;albedo: ;confidence: ;motionLevel: 0;weatherinfo: null;temperature: 32;

ಶಿಡ್ಲಘಟ್ಟ.ಆ,೩೧-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ. ಟ್ರಸ್ಟ್‌ನ ಶಿಡ್ಲಘಟ್ಟ ತಾಲ್ಲೂಕು ಘಟಕದ ವತಿಯಿಂದ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದಲ್ಲಿ ವಿಜೀಪುರದ ಶ್ರೀ ಮಹದೇವ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.


ಬಳಿಕ ಮಾತನಾಡಿದ ತಾಲ್ಲೂಕು ಯೋಜನಾ ನಿರ್ದೇಶಕ ಪ್ರಕಾಶ್ ನಾಯಕ್,ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಸಂಸ್ಥೆಯು ತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ೪೦ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಹೇಳಿದರು.


ಸಾಮಾಜಿಕ ಭದ್ರತೆ, ಆರ್ಥಿಕ ಸಬಲೀಕರಣ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ, ಕೆರೆಗಳ ಹೂಳೆತ್ತುವಿಕೆ ಹಾಗೂ ಜೀರ್ಣೋದ್ಧಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಯೋಜನೆಯ ವತಿಯಿಂದ ನೆರವು ನೀಡಲಾಗುತ್ತಿದೆ ಎಂದರು.


ಜನಜಾಗೃತಿ ವೇದಿಕೆ ಸದಸ್ಯ ತ್ಯಾಗರಾಜು ಮಾತನಾಡಿ,ಶ್ರೀ ಕ್ಷೇತ್ರದ ವೀರೇಂದ್ರ ಹೆಗ್ಗಡೆ ಜನರಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ತಾಲ್ಲೂಕಿನ ೧೨೦ಕ್ಕೂ ಹೆಚ್ಚು ವೃದ್ಧರಿಗೆ ಮಾಸಾಶನ ನೀಡುತ್ತಿದ್ದು, ರುದ್ರಭೂಮಿ ಅಭಿವೃದ್ಧಿಗೂ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.


ಜಾತಿ, ಮತ, ಪಕ್ಷಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಾರ್ಯನಿರ್ವಹಿಸುತ್ತಿದೆ ಅದರಲ್ಲಿ ಮಹಿಳೆಯರು ಸಂಘಟಿತರಾಗಿ ಇಂತಹ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿ ಎಂದು ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.


ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಾರ್ಮಿಕ ಸಭೆ ನಡೆಯಿತು.


ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ಹಿತ್ತಲಹಳ್ಳಿ ಸುರೇಶ್, ಲಿಯೋ ಕ್ಲಬ್ ಶ್ರೀಕಾಂತ್, ಇಂದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಜುಳ ನಾಗರಾಜ್ ಹಾಗೂ ಅನುರಾಧ, ಪುಷ್ಟಲತ, ರೂಪಾ ಬಾಯಿ, ಅನಿತಾ, ನಗೀನಾ ಮತ್ತು ಯೋಜನಾ ಸಿಬ್ಬಂದಿಗಳು ಹಾಗೂ ನೂರಾರು ಮಹಿಳೆಯರು ಉಪಸ್ಥಿತರಿದ್ದರು.