
ಬೆಂಗಳೂರು:ಅ.೧೦- ಯುವಕರ ಆಶಾಕಿರಣ, ಸರಳ ಸಜ್ಜನ ರಾಜಕಾರಣಿ, ಮಾಜಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಸಚಿವರು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಅವರ ಜನ್ಮದಿನದ ಅಂಗವಾಗಿ ಅಜ್ಮೀರ್‌ನ ಖ್ವಾಜಾ ಗರೀಬ್ ನವಾಜ್ ದರ್ಗಾದಲ್ಲಿ ಗಾಂಧಿನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡರಾದ ಜಮೀರ್ ಪಾಷ, ಏಜಾಜ್ ಪಾಷ, ಅಸ್ಗರ್ ಪಾಷ ಹಾಗೂ ನಯಾಜ್ ಪಾಷ ಅವರು ದರ್ಗಾದಲ್ಲಿ ಚಾದರ್ ಸಮರ್ಪಿಸಿ, ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥಿಸಿದರು.
ದಿನೇಶ್ ಗುಂಡೂರಾವ್ ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಹೊಂದುವುದರ ಜತೆಗೆ, ಅವರ ರಾಜಕೀಯ ಜೀವನದಲ್ಲಿ ಮತ್ತಷ್ಟು ಉನ್ನತ ಸ್ಥಾನಕ್ಕೇರಬೇಕು. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಲಿ ಎಂದು ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
























