
ಹುಬ್ಬಳ್ಳಿ, ನ.೧೫: ಇಲ್ಲಿನ ಸೇವಾಭಾರತಿ ಸಂಸ್ಥೆಯ ಆವರಣದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ವಿಶೇಷ ದೀಪ ಪೂಜೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಭಾವ ಮತ್ತು ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಕಮಲಾ ಜೋಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ತೀಕ ಮಾಸದ ಮಹತ್ವ ಹಾಗೂ ದೀಪಾರಾಧನೆಯ ಸಾಂಸ್ಕöÈತಿಕ ಮತ್ತು ಆಧ್ಯಾತ್ಮಿಕ ಹಿನ್ನೆಲೆಯನ್ನು ವಿವರಿಸಿದರು.
ನಗರದ ವಿವಿಧ ಬಡಾವಣೆಗಳಿಂದ ನೂರಾರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೀಪಗಳನ್ನು ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಮಂಜುಳಾ ಕೃಷ್ಣನ್, ಮಾತಾಜಿ, ಶ್ರೀಮತಿ ಅನಿತಾ ಪಾಟೀಲ, ಶ್ರೀಮತಿ ನಂದಾ ಸವಡಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





















