
ಬೀದರ, ನ.೨೫: ಜಿಲ್ಲೆಯ ಎಲ್ಲಾ ವಿಕಲಚೇತನರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ತಿಳಿಸಿದರು
ಅವರು ಸೋಮವಾರ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಗವಿಕಲರಿಗೆ ಸರಿಯಾದ ಹಾಗೂ ಸಮರ್ಪಕ ಅವಕಾಶವನ್ನು ಒದಗಿಸಿಕೊಟ್ಟಾಗ ಮಾತ್ರ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುಭಾಷ ರತ್ನ ಅವರು ಮಾತನಾಡಿ, ವಿಕಲಚೇತನರು (ಅಂಗವಿಕಲರು) ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗÀವಹಿಸಿ ಯಶಸ್ವಿಗೊಳಿಸಲು ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡೆ ಇಲಾಖೆಯ ಸಹಾಯಕ ನಿರ್ದೇಶಕ ಅನಿಲ್ ಬೇಲ್ದಾರ, ರಾಜು ಕಡ್ಯಾಳ, ಸಂತೋಷ ಭಾಲ್ಕೆ, ಸಂಜು ಬಿ ಕೇರಿ, ಅಂಕುರ ಸದಲಾಪೂರ, ರಾಜಪ್ಪಾ ಎಂ ಪಾತರಪಳ್ಳಿ, ಬೀದರ ಜಿಲ್ಲೆಯ ಎಲ್ಲಾ ವಿಶೇಷ ಮಕ್ಕಳ ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು, ವಿಶೇಷ ಮಕ್ಕಳು ಹಾಗೂ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲೂö, ವಿ.ಆರ್.ಡಬ್ಲೂöಗಳು, ಯು.ಆರ್.ಡಬ್ಲೂöಗಳು ಹಾಗೂ ವಿಕಲಚೇತನರ ಬಾಂಧವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

























