
ಇಂಡಿ : ನ.೨೪:ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸಾಕಷ್ಟು ತಾರತಮ್ಯ ಆಗುತ್ತಿರುವುದು ಕಂಡುಬAದಿರುತ್ತದೆ.ಅದನ್ನು ಮೇಲಾಧಿಕಾರಿಗಳು ಸರಿ ಪಡಿಸಿಕೊಳ್ಳಬೇಕು ಎಂದು ಡಿಎಸ್ ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಶ್ರೀ ಲೋಹಿತಕುಮಾರ ರೂಗಿ ಅವರು ಮನವಿ ಮಾಡಿಕೊಂಡಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಿಗೆ ಒಬ್ಬರಂತೆ ಎಸ್ ಬಿ. ಮತ್ತು ಎಂ ಟಿ ಅಂತ ನೇಮಕ ಮಾಡಿಕೊಳ್ಳುವ ಅಧಿಕಾರ ಠಾಣಾಧಿಕಾರಿಗಳಿಗೆ ಇರುತ್ತದೆ. ಈ ಅಧಿಕಾರಿಗಳು ತಮಗೆ ಬೇಕಾದವರಿಗೆ ಹಾಗೂ ಜಾತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿರುತ್ತಾರೆ. ಇಲ್ಲಿ ದಲಿತ ಹಿಂದುಳಿದ ವರ್ಗದವರಿಗೆ ಯಾವುದೇ ಅವಕಾಶವಿರುವುದಿಲ್ಲ. ಅವರು ಅವಕಾಶದಿಂದ ವಂಚಿತರಾಗುತ್ತಿರುತ್ತಾರೆ. ಅದರಲ್ಲೂ ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿದೆ.
ಹೀಗಾಗಿ ಇದನ್ನು ಗೃಹ ಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ಜಾತಿ ತಾರತಮ್ಯವನ್ನು ಹೊಗಲಾಡಿಸಬೇಕು ಎಂದು ಗೃಹ ಸಚಿವರು ಕರ್ನಾಟಕ ಸರ್ಕಾರ ಅವರಲ್ಲಿ ಮನವಿ ಮಾಡಿಕೊಂಡರು.

























