
ಬೀದರ್: ಜ.31:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆ.ಕೆ.ಆರ್.ಡಿ.ಬಿ.)ಯ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಕೈಗೊಳ್ಳಬೇಕಾಗಿರುವ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ವಿಕಾಸಸೌಧದ ಕೊಠಡಿ ಸಂಖ್ಯೆ 318ರಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದರು. ಸಚಿವ ರಹೀಂ ಖಾನ್, ಶಾಸಕರುಗಳಾದ ಡಾ.ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಶರಣು ಸಲಗರ್, ಎಂ.ಜಿ.ಮೂಳೆ, ಚಂದ್ರಶೇಖರ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ, ಕೆಕೆಆರ್.ಡಿಬಿ ಕಾರ್ಯದರ್ಶಿ ಅತುಲ್ ನಳಿನ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
























