
ಶಿಗ್ಗಾವಿ,ಏ11: ಪಟ್ಟಣದ ದಿಶಾ ಇಂಟರನ್ಯಾಷನಲ್ ವಿಜ್ಞಾನ ಪಿ.ಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ 100ರಷ್ಟಾಗಿದೆ. ಮೂವರು ವಿದ್ಯಾರ್ಥಿಗಳು ಶೇ 95ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. 18 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. 29 ವಿದ್ಯಾರ್ಥಿಗಳು ಶೇ 85ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ.
ಶಾಹಿನಾಜ್ ಖಾನಮ್ ಕಾಜಿಖಾನ್ ಶೇ 98 ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಗಂಗಾಧರಯ್ಯ ಹಿರೇಮಠ ಶೇ 96.13 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ರುಕೀಯಾ ಆಲನವರ ಶೇ 95.5 ಅಂಕ ಪಡೆದಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ರಾಘವೇಂದ್ರ ಬೇವಿನಮರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























