
ಬೆಂಗಳೂರು ಡಿ.೫ ವಿಶೇಷಚೇತನರ ಸಬಲೀಕರಣದ ದ್ಯೋತಕವೆಂಬಂತೆ, ಅಂತಾರಾಷ್ಟ್ರೀಯ ವಿಶೇಷಚೇತನರ ದಿನದಂದು ಸಮರ್ಥನಂ ಟ್ರಸ್ಟ್ ಫಾರ್ ದ ಡಿಸೇಬಲ್ಡ್ ಮತ್ತು ಆಪ್ಟಮ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ೧೫೦ ಅತ್ಯಾಧುನಿಕ ಸಹಾಯಕ ಸಾಧನಗಳು ಮತ್ತು ೫೦ ಮೋಟಾರು ಚಾಲಿತ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ನೆರವು ಬೆಂಗಳೂರಿನ ವಿಶೇಷಚೇತನರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದರ ಜೊತೆಗೆ, ಅವರು ಆರ್ಥಿಕವಾಗಿ ಸ್ವತಂತ್ರರಾಗಲು ಮತ್ತು ಘನತೆಯ ಬದುಕು ಕಟ್ಟಿಕೊಳ್ಳಲು ಭದ್ರ ಬುನಾದಿ ಹಾಕಿಕೊಟ್ಟಿದೆ.
“ಈ ಸಮಾರಂಭದಲ್ಲಿ ಆಪ್ಟಮ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ಉಮಾ ರತ್ನಂ ಕೃಷ್ಣನ್, ಸಮರ್ಥನಂ ಟ್ರಸ್ಟ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ಟ್ರಸ್ಟಿಯಾದ ಡಾ. ಮಹಾಂತೇಶ್ ಜಿ. ಕಿವಡಸಣ್ಣವರ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇವರೊಂದಿಗೆ ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ ವಿಶೇಷಚೇತನರ ಹಕ್ಕುಗಳ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಹಾಗೂ ಎರಡೂ ಸಂಸ್ಥೆಗಳ ಹಿರಿಯ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


























