Home ಜಿಲ್ಲೆ ಕಲಬುರಗಿ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ

ಗುತ್ತಿಗೆ ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ

ಕಲಬುರಗಿ,ಜು.19-ನಗರದ ಜಿಲ್ಲಾ ಪಂಚಾಯತ ಹೊಸ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ರವರ ಅಧ್ಯಕ್ಷತೆಯಲ್ಲಿ ಕಲಬುರಗಿ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ ಷರೀಫ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್ ಸಂಕನೂರ್ ಉಪಸ್ಥಿತರಿದ್ದರು. ಇದೇ ವೇಳೆ ಅವರು ಗುತ್ತಿಗೆ ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಶಂಕ್ರಪ್ಪ ಮೈಲಾರಿ, ಕಲಬುರಗಿ ವಿಭಾಗೀಯ ಉಪ ನಿರ್ದೇಶಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಕಲಬುರಗಿ ಡಾ.ಎ.ಎಸ್. ರುದ್ರವಾಡಿ, ಡಾ. ಶರಣಬಸಪ್ಪ ಗಣಜಲ್ ಖೇಡ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ.ಸಿದ್ದು ಪಾಟೀಲ್, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ವಿವೇಕಾನಂದ ರೆಡ್ಡಿ. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರವಿಕಾಂತಿ ಕ್ಯಾತನಾಳ್, ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.