Home ಜಿಲ್ಲೆ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ

ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ

ಧಾರವಾಡ, ಸೆ.೧೦: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಧಾರವಾಡ ಅವರ ಸಹಯೋಗದಲ್ಲಿ ಧಾರವಾಡ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ೨೦೨೬-೨೭ ನೇ ಸಾಲಿನ ಸಪ್ಟೆಂಬರ್ ೦೯, ೨೦೨೬ ರಂದು ಜರುಗಿದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಕಾಶ ಹಳಿಯಾಳ ಅವರು ಚಾಲನೆ ನೀಡಿದರು.


ಕ್ರೀಡಾಕೂಟಕ್ಕೆ ಸುಮಾರು ೧೦೦೦ ಕ್ಕಿಂತ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸದಾನಂದ ಹೆಚ್ ಅಮರಾಪುರ, ಸ್ವಾಗತಿಸಿದರು.