
ಗುರುಮಠಕಲ್,ಆ.13-ಯಲ್ಹೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಕೊಡುತ್ತಿರುವ ಉಚಿತ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಊರಿನ ಗಣ್ಯರು ಹಾಗೂ ಶಿಕ್ಷಣ ಪ್ರೇಮಿಗಳಾದ ಸೋಮನಾಥ ರೆಡ್ಡಿ ಬೋರೆಡ್ಡಿಯವರು ಮಾತನಾಡಿ, ಸರ್ಕಾರ ಕೊಡುತ್ತಿರುವ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಶಾಲೆಗೆ ಹಾಗೂ ಊರಿಗೆ ಉತ್ತಮ ಹೆಸರು ತರಬೇಕೆಂದು ವಿದ್ಯಾರ್ಥಿಗಳಿಗೆ ಹಿತೋಪದೇಶ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸಪ್ಪ ಕಾವಲಿ ಮುಖ್ಯ ಗುರುಗಳಾದ ಹುಸೇನಪ್ಪ ಸಕ್ರಿ, ಟಿರಾಮುಲು ಮತ್ತು ಶಾಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.






























