
ಹೊಸಕೋಟೆ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ೭೬ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲುಗಳು, ಬಿಸ್ಕೆಟ್, ಬ್ರೆಡ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್, ಎಸ್‌ಸಿ ಎಸ್‌ಟಿ ಘಟಕದ ಜಿಲ್ಲಾ ಅಧ್ಯಕ್ಷ ದೇವನಗುಂದಿ ನಾರಾಯಣಸ್ವಾಮಿ ಮತ್ತು ಬಿಜೆಪಿಯಿಂದ ಯುವ ಮುಖಂಡ ದೊಡ್ಡನಲ್ಲೂರು ಮುನಿಕೃಷ್ಣ ಅಲಿಯಾಸ್ ಕಿಟ್ಟಿ ಮತ್ತು ತಾರಾ ವೆಂಕಟೇಶ್, ಮುಖಂಡರು ಹಾಜರಿದ್ದರು.




























