ವಿದ್ಯಾರ್ಥಿಗಳಿಗೆ ನೋಟ್ ಬುಕ್, ಬ್ಯಾಗ್ ವಿತರಣೆ

ಕೋಲಾರ,ಆ.೨- ತಾಲೂಕಿನ ನರಸಾಪುರ ಹೊಂಡಾ ಕಂಪನಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ವಕ್ಕಲೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಕಲಿಕಾ ಸಾಮಾಗ್ರಿ, ಹಾಗೂ ಬ್ಯಾಗ್ ವಿತರಿಸಲಾಯಿತು,


ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಮಾಡಿ ಮಾತನಾಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ವಾತವರಣ, ಪ್ರೋತ್ಸಾಹ ಅಗತ್ಯವಿದೆ ಈ ನಿಟ್ಟಿನಲ್ಲಿ ಹೊಂಡಾ ಕಂಪನಿಯು ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಮುಂದೆ ಇಂತಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಾವುಗಳು ಕೂಡ ಶ್ರಮಿಸುವಂತಾಗಬೇಕಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಹೊಂಡಾ ಕಂಪನಿಯ ಅಧಿಕಾರಿ ಮಲ್ಲಿಕಾರ್ಜುನ್, ವಕ್ಕಲೇರಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹಾಗೂ ಗ್ರಾಪಂ ಸದಸ್ಯ ಬೊಟ್ಟು ರಾಜಪ್ಪ, ಮುಖ್ಯ ಶಿಕ್ಷಕ ಆರ್. ಹರಿನಾಥ್ ಮುಖಂಡ ಚಿನ್ನಾಪುರ ನಾರಾಯಣಸ್ವಾಮಿ, ಸೇರಿದಂತೆ ಹೊಂಡಾ ಕಂಪನಿಯ ಸಿಬ್ಬಂದಿ, ಶಾಲೆಯ ಶಿಕ್ಷಕರು ವಿಧ್ಯಾರ್ಥಿಗಳು ಇದ್ದರು.