
ಸೇಡಂ, ಸೆ ,26: ಪಟ್ಟಣದ ವಾರ್ಡ್ ನಂಬರ್ 4ರ ಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿಂದು ಗರ್ಭಿಣಿಯರು, ಬಾಣಂತಿಯರು, ತಿಂಗಳಿಂದ 6 ವರ್ಷದ ಮಕ್ಕಳಿಗೆ ಹಾಗೂ ಕಿಶೋರಿಯರಿಗೆ ಸರ್ಕಾರದಿಂದ ಒದಗಿಸಲಾಗುವ ಪೂರಕ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ವೇಳೆಯಲ್ಲಿ ಕಲಬುರಗಿ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ ನಾಡೇಪಲ್ಲಿ ಹಿರಿಯ ಮೇಲ್ವಿಚಾರಕರಾದ ಶ್ರೀಮತಿ ಸರಿತಾ ಕುಲಕರ್ಣಿ, ಶ್ರೀಮತಿ ಮೀನಾಕ್ಷಿ ಪಾಟೀಲ್,ಶ್ರೀಮತಿ ಮಲ್ಲಮ್ಮ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಎಂ.ಕೆ.ಸೇರಿದಂತೆ ಹಲವರು ಉಪಸ್ಥಿತರಿದ್ದರು


























