Home ಜಿಲ್ಲೆ ಕಲಬುರಗಿ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ

ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ

ಚಿತ್ತಾಪುರ; ಪಟ್ಟಣದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಂತರ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ನಾಗರೆಡ್ಡಿ ಗೋಪಸೆನ್ ಮಾತನಾಡಿ, ರೈತರು ರಿಯಾಯಿತಿ ಬೀಜ ಪಡೆದು ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು. ಹನಿ ನೀರಾವರಿ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜದ ಚೀಲಗಳನ್ನು ವಿತರಿಸಲಾಯಿತು. ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ, ರೈತರಿಗೆ ಗುಣಮಟ್ಟದ ಬೀಜ ಹಾಗೂ ಕೃಷಿಗೆ ಸಂಬಂಧಿಸಿದ ಅಗತ್ಯ ಮಾಹಿತಿ ಒದಗಿಸುವ ಕುರಿತು ಮಾತನಾಡಿದರು.
ಕೃಷಿ ಚಟುವಟಿಕೆಗಳಿಗೆ ಸಮಯೋಚಿತವಾಗಿ ಬೀಜ ಸೇರಿದಂತೆ ಅಗತ್ಯ ಕೃಷಿ ಪರಿಕರಗಳು ದೊರೆಯುವುದರಿಂದ ರೈತರಿಗೆ ಅನುಕೂಲವಾಗಲಿದೆ. ರೈತರು ಇಲಾಖೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಕೈಗೊಳ್ಳುವಂತೆ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಟಿಎಪಿಎಂ’ಸಿ ಅಧ್ಯಕ್ಷ ದೇವಿಂದ್ರ ಅಣಕಲ್, ಕೃಷಿ ಸಮಾಜದ ಸದಸ್ಯರಾದ ನಿಂಗಣ್ಣ ಹೇಗಲೇರಿ, ಬಾಬು ಕಾಶಿ, ಶಾಮರಾವ ಸಂಗಾವಿ, ರವೀಂದ್ರಕುಮಾರ್, ಬಸವರಾಜ ಭಂಕಲಗಿ, ಕರಣಕುಮಾರ್, ಸಚಿನ್ ಕುಮಾರ್ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ರೈತ ಮುಖಂಡರು ಹಾಗೂ ಹಲವಾರು ರೈತರು ಇದ್ದರು.