Home ಜಿಲ್ಲೆ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ” ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಿ: ಸಚಿವ ಲಕ್ಷ್ಮಣ ಸವದಿ

ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ” ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಿ: ಸಚಿವ ಲಕ್ಷ್ಮಣ ಸವದಿ

ಅಥಣಿ : ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಿ, ತಮ್ಮ ದೈನಂದಿನ ಚಟುವಟಿಕೆಗಳನ್ನು ಸುಗಮವಾಗಿ ನಿರ್ವಹಿಸಲು ಸರ್ಕಾರದ ವಿವಿಧ ಯೋಜನೆಗಳ ಮೂಲಕ ನೆರವು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.
ವಿಕಲಚೇತನರು ಯಾರಿಗೂ ಹೊರೆಯಾಗದೆ ಸ್ವಾವಲಂಬಿಗಳಾಗಿ ಬದುಕಲು ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ ೨೦ ದ್ವಿಚಕ್ರ ವಾಹನಗಳು ಸೇರಿ ಒಟ್ಟು ೨೯ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಫಲಾನುಭವಿಗಳಿಗೆ ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ ಹಾಗೂ ಇತರ ಅಗತ್ಯ ಕಾರ್ಯಗಳಿಗೆ ಸಂಚರಿಸಲು ಅನುಕೂಲವಾಗಲಿದೆ. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ವಿಕಲಚೇತನರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಅಗತ್ಯವಿದೆ. ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ. ಜಿಪಂ ಅಧಿಕಾರಿ ವೀರಣ್ಣ ವಾಲಿ. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್. ಅಧ್ಯಕ್ಷೆ ಶಿವಲೀಲಾ ಬುಟಾಳಿ. ಉಪಾಧ್ಯಕ್ಷ ಭುವನೇಶ್ವರಿ ಯಂಕAಚ್ಚಿ. ಪುರಸಭೆ ಸದಸ್ಯರಾದ ಸೈಯದಅಮೀನ್ ಗದ್ಯಾಳ. ಕಲ್ಲೇಶ ಮಡ್ಡಿ. ಸಂತೋಷ ಸಾವಡಕರ. ಮಲ್ಲೇಶ ಹುದ್ದಾರ. ರಾಜು ಗುಡೋಡಗಿ. ವಿಲಿನರಾಲ್ ಯಳಮಲ್ಲೆ. ಬಸವರಾಜ ನಾಯಿಕ. ರಮೇಶ ಪವಾರ. ಮುಖಂಡರಾದ ರವಿ ಭಡಕಂಬಿ. ಪ್ರದೀಪ ನಂದಗಾAವ. ಆಸೀಫ್ ತಾಂಬೋಳಿ. ಮಲ್ಲು ಕುಳ್ಳೋಳ್ಳಿ. ಬೀರಪ್ಪ ಯಂಕAಚ್ಚಿ. ಸೇರಿದಂತೆ
ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ವಿಕಲಚೇತನ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು. ಮುಖಂಡರು ಹಾಗೂ ವಿಕಲಚೇತನ ಫಲಾನುಭವಿಗಳು ಉಪಸ್ಥಿತರಿದ್ದರು. ದ್ವಿಚಕ್ರ ವಾಹನ ಪಡೆದ ಫಲಾನುಭವಿಗಳು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.