
ಧಾರವಾಡ,ಫೆ 28 : ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವುದು ಅತ್ಯಂತ ಮುಖ್ಯ. ಭಯವು ನಮಗೆ ಗೊತ್ತಿದ್ದ ವಿಷಯಗಳನ್ನೇ ಮರೆಸುವಂತೆ ಮಾಡುತ್ತದೆ. ಆದ್ದರಿಂದ ಪರೀಕ್ಷೆಯನ್ನು ಒಂದು ಅವಕಾಶವೆಂದು ಪರಿಗಣಿಸಿ, ನಿಮ್ಮ ಶ್ರಮವನ್ನು ತೋರಿಸುವ ವೇದಿಕೆಯೆಂದು ಭಾವಿಸಿ, ಸಮರ್ಪಕವಾದ ಉತ್ತರಗಳನ್ನು ಬರೆಯುವ ಮೂಲಕ ಪಿಯುಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಅವರು ನಿನ್ನೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗಾಗಿ ಕೈಗೊಂಡ ಜಿಲ್ಲಾಡಳಿತದ ಸಿದ್ದತೆಗಳ ಕುರಿತು ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28, 2026 ರಿಂದ ಮಾರ್ಚ್ 17, 2026 ರವರೆಗೆ ನಡೆಯಲಿವೆ. ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆಗಳು ಜರುಗಲಿವೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 12,665 ಪುರುಷ ಹಾಗೂ 14,289 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 26,954 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಪ್ರಥಮ ಬಾರಿಗೆ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತೀರುವವರು 11,269 ಪುರುಷ ಹಾಗೂ 13,445 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 24,714 ವಿದ್ಯಾರ್ಥಿಗಳು. ಮತ್ತು ಪುರಾವರ್ತಿತ (ಖeಠಿeಚಿಣeಡಿs) ಪರೀಕ್ಷಾರ್ಥಿಗಳು 1,234 ಪುರುಷ ಹಾಗೂ 682 ಮಹಿಳಾ ವಿದ್ಯಾರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳಾಗಿ 150 ಪುರುಷ ಹಾಗೂ 148 ಮಹಿಳಾ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಸುಧಾರಣೆಗಾಗಿ 12 ಪುರುಷ ಮತ್ತು 14 ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ 2,240 ಪರೀಕ್ಷಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 3,152 ಪುರುಷ ಹಾಗೂ 3,455 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 6,607 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 3,315 ಪುರುಷ ಹಾಗೂ 3,863 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 7,178 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 6,198 ಪುರುಷ ಹಾಗೂ 6,971 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 13,169 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
43 ಪಿಯುಸಿ ಪರೀಕ್ಷಾ ಕೇಂದ್ರಗಳು: ಧಾರವಾಡ ಜಿಲ್ಲೆಯಲ್ಲಿ ಒಟ್ಟು 176 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ ಧಾರವಾಡ 16, ಹುಬ್ಬಳ್ಳಿ 18, ಅಳ್ನಾವರ 1, ಕಲಘಟಗಿ 2, ಕುಂದಗೋಳ 3, ನವಲಗುಂದ 2 ಹಾಗೂ ಅಣ್ಣಿಗೇರಿ 1 ಪರೀಕ್ಷಾ ಕೇಂದ್ರಗಳಿವೆ ಎಂದು ಅವರು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೂರ್ವಭಾವಿ ಭೇಟಿ ನೀಡಿ, ಸಿಸಿಟಿವಿ ವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳಿರುವುದನ್ನು ಖಚಿತಪಡಿಸಲಾಗಿದೆ. ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಪರೀಕ್ಷಾರ್ಥಿಗಳಿಗೆ ಅಗತ್ಯವಾದ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳು ಸಮರ್ಪಕವಾಗಿ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಾಧಿಕಾರಿಗಳಿಗೆ ಪರೀಕ್ಷೆಯನ್ನು ಸುಗಮ, ಶಾಂತಿಯುತ ಹಾಗೂ ಗೊಂದಲರಹಿತವಾಗಿ ನಡೆಸುವಂತೆ ಹಾಗೂ ಯಾವುದೇ ನಕಲುಗಳಿಗೆ ಅವಕಾಶ ಕೊಡಬಾರದೆಂದು ಕಟ್ಟುನಿಟ್ಟಿನ ನಿರ್ದೇಶನವನ್ನು ಸಭೆ ಜರುಗಿಸಿ, ನೀಡಲಾಗಿದೆ. ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
200 ಮೀಟರ್ ವ್ಯಾಪ್ತಿಯನ್ನು ನಿμÉೀಧಿತ ಪ್ರದೇಶ: ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿμÉೀಧಿತ ಪ್ರದೇಶವೆಂದು ಘೋಷಿಸಿ, ಆ ವ್ಯಾಪ್ತಿಯಲ್ಲಿರುವ ಜರಾಕ್ಸ್, ಸೈಬರ್ ಸೆಂಟರ್ ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ಪರೀಕ್ಷಾ ಸಂಬಂಧಿತ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಖಜಾನೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 24×7 ಸಿಸಿಟಿವಿ ಕ್ಯಾಮೆರಾ ವೀಕ್ಷಣೆ ವ್ಯವಸ್ಥೆ ಕಲ್ಪಿಸಲಾಗಿದೆ. ವ್ಯಕ್ತಿಗಳ ಚಲನವಲನವನ್ನು ನಿರಂತರವಾಗಿ ಗಮನಿಸಲಾಗುತ್ತಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತಿ ವ್ಯವಸ್ಥೆ ಮಾಡಲಾಗಿದ್ದು, ಶಾಂತಿ ಮತ್ತು ಭದ್ರತೆ ಕಾಪಾಡಲು ಸೂಕ್ತ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
ಪರೀಕ್ಷೆಯ ನಿಷ್ಪಕ್ಷಪಾತತೆಯನ್ನು ಖಚಿತಪಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಿಟಿಂಗ್ ಸ್ಕ್ವಾಡ್, ಜಿಲ್ಲಾ ಜಾಗೃತದಳ ಹಾಗೂ ತಾಲ್ಲೂಕು ಜಾಗೃತದಳಗಳನ್ನು ನೇಮಿಸಿ, ಪರೀಕ್ಷೆಗಳಲ್ಲಿ ನಕಲು ಆಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಪರೀಕ್ಷಾ ಕೇಂದ್ರದಲ್ಲಿ ಮುಖ್ಯಾಧಿಕಾರಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಿಬ್ಬಂದಿಗಳು ಮೊಬೈಲ್ ಫೆÇೀನ್, ಸ್ಮಾರ್ಟ್ ಫೆÇೀನ್, ಸ್ಮಾರ್ಟ್ ವಾಚ್, ಐ-ಫೆÇೀನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಬಾರದೆಂದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಸುಗಮವಾಗಿ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ನಿಯಮಗಳ ಬಗ್ಗೆ ಪ್ರತಿ ಕಾಲೇಜುಗಳ ಮೂಲಕ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳು ಞseಚಿb.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಡಾ.ತೇಜಸ್ವಿನಿ ನಾರಾಯಣಕರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಎಡಿಸಿ ಅವರಾದ ಗೀತಾ ಸಿ.ಡಿ., ಇದ್ದರು.
























