
ಯಾದಗಿರಿ:ಜೂ.೧೭: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ವಿಳಂಬವಿಲ್ಲದೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಲಭ್ಯತೆ, ಪೂರೈಕೆ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲಾಖಾವಾರು ಸಮಗ್ರ ಕ್ರಿಯಾಯೋಜನೆ ಸಿದ್ಧಪಡಿಸಿ, ಮುಂಗಾರು ಅವಧಿಯಲ್ಲಿ ಮಳೆಯ ಕೊರತೆ ಉಂಟಾದರೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಕಂಟಿAಜೆನ್ಸಿ ಪ್ಲ್ಯಾನ್ ಅನ್ನು ಮುಂದಿನ ಹದಿನೈದು ದಿನಗಳೊಳಗೆ ಸಲ್ಲಿಸುವಂತೆ ಸೂಚಿಸಿದರು.
ಸಾರ್ವಜನಿಕರ ಕುಂದುಕೊರತೆಗಳ ವಿಲೇವಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಐಪಿಜಿಆರ್‌ಎಸ್, ಸಕಾಲ ಹಾಗೂ ಇತರೆ ದೂರು ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಪರಿಹರಿಸಬೇಕು. ಜನಸ್ಪಂದನ ವ್ಯವಸ್ಥೆಯ ಉದ್ದೇಶ ಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ನೀಡುವುದಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕ ಅಹವಾಲುಗಳ ವಿಲೇವಾರಿ ಹಾಗೂ ಸರ್ಕಾರದ ವಿವಿಧ ಅಭಿಯಾನಗಳ ಅನುಷ್ಠಾನಕ್ಕಾಗಿ ಸಮಿತಿಗಳನ್ನು ರಚಿಸಲಾಗುವುದು. ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಪ್ರತಿಯೊಂದು ಇಲಾಖೆಯು ತನ್ನ ವ್ಯಾಪ್ತಿಯ ಯೋಜನೆಗಳು, ಸೇವೆಗಳು ಹಾಗೂ ಸಾರ್ವಜನಿಕರಿಗೆ ನೀಡುವ ಸೌಲಭ್ಯಗಳ ಕುರಿತು ಸಿಟಿಜನ್ ಚಾರ್ಟರ್ ಅನ್ನು ಮುಂದಿನ ಹತ್ತು ದಿನಗಳಲ್ಲಿ ಅಳವಡಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳ ಕಚೇರಿಗಳ ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ, ಬ್ಯಾಕಪ್ ಸೌಲಭ್ಯ, ಶಾಲೆ, ಕಾಲೇಜು, ಆಸ್ಪತ್ರೆ, ವಸತಿ ನಿಲಯಗಳು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸಸಿಗಳನ್ನು ನೆಟ್ಟು ಹಸಿರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಯುವ ಉದ್ಯೋಗ ಸೇತು ಮಿಷನ್ ಅಡಿಯಲ್ಲಿ ಯಾದಗಿರಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೋಂದಣಿ ಮಾಡುವಂತೆ ಕ್ರಮ ಕೈಗೊಳ್ಳಬೇಕು. ಒಂದು ಬಾರಿ ವಿದ್ಯುತ್ ಸಂಪರ್ಕ ಪರಿಹಾರ ಯೋಜನೆ, ಮನೆಗಳನ್ನು ಔಪಚಾರಿಕ ವಿದ್ಯುತ್ ಜಾಲಕ್ಕೆ ಸಂಪರ್ಕಿಸುವ ಕಾರ್ಯ ಹಾಗೂ ಎಐ ಆಧಾರಿತ ಸಮಗ್ರ ದೂರು ಪರಿಹಾರ ವ್ಯವಸ್ಥೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸಿದ್ಧರಾಗಬೇಕು ಎಂದರು.
ಕರ್ತವ್ಯ ???ಪ್‌ನಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೋಂದಣಿ ಪೂರ್ಣಗೊಳಿಸುವಂತೆ ನೋಡಿಕೊಳ್ಳಬೇಕು. ಅಲ್ಲದೆ, ಕಲ್ಯಾಣ ಕರ್ನಾಟಕದ ವಿಶೇಷ ಸ್ಥಾನಮಾನವಾದ ೩೭೧(ಜೆ) ಅಡಿಯಲ್ಲಿ ಇಲಾಖಾವಾರು ಖಾಲಿ ಇರುವ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳ ಮಾಹಿತಿಯನ್ನು ವರದಿ ರೂಪದಲ್ಲಿ ಸಲ್ಲಿಸುವಂತೆ ಸೂಚಿಸಿದರು.
ಮುಖ್ಯಮಂತ್ರಿಗಳ ಸೂಚನೆಯಂತೆ ಭೂ-ಗ್ಯಾರಂಟಿ ಅಭಿಯಾನದಡಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸುವ ಪ್ರಕ್ರಿಯೆಗೆ ವೇಗ ನೀಡಬೇಕು. ಸರ್ಕಾರಿ ಜಮೀನುಗಳ ಒತ್ತುವರಿ ತೆರವು, ಜಮೀನುಗಳ ಆರ್‌ಟಿಸಿ ಸಂಬAಧಿತ ಬಾಕಿ ವಿಚಾರಗಳ ಕುರಿತು ಮುಂದಿನ ಹತ್ತು ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


























