ಕಲಬುರಗಿ,ಸೆ.22-ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ 33 ನೇ ವಾರ್ಡ್ ಸುಂದರ ನಗರದಲ್ಲಿ ಜಿಲ್ಲಾಧಿಕಾರಿಗಳಾದ ಬಿ.ಪೌಜಿಯಾ ತರುನ್ನುಮ್ ಅವರು ಚಾಲನೆಯನ್ನು ನೀಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭoವರ್ ಸಿಂಗ್ ಮೀನಾ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, 33 ನೇ ವಾರ್ಡ್ ಕಾಪೆರ್Çರೇಟರ್ ರಾಗಮ್ಮ ಇನಾಮದಾರ್, ಸಾಮಾಜಿಕ ಮತ್ತು ಶೈಕ್ಷಣಿಕ ಜಿಲ್ಲಾ ಸಮನ್ವಯ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ್ ವೈ, ಸಮೀಕ್ಷಾ ಗಣತಿಯ ಕಲಬುರಗಿ ತಾಲೂಕಿನ ನೋಡಲ್ ಅಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಯೋಜನೆಯ ವ್ಯವಸ್ಥಾಪಕ ಅರವಿಂದ್ ರೆಡ್ಡಿ, ಮುರಾರ್ಜಿ ಶಾಲೆಯ ಶಿಕ್ಷಕಿ ಜಗದೇವಿ, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
























