
ವಾಡಿ,ಸೆ.13: ಸಮೀಪದ ಬಳವಡಗಿ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯ ಸೇರಿದಂತೆ ಭಾರಿ ನಷ್ಟ ಉಂಟಾಗಿದ್ದು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಪರಿಹಾರದ ಭರವಸೆ ನೀಡಿದರು.
ನೀರು ನುಗ್ಗಿದ ಮನೆಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗರ್ಭಿಣಿಯರು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಯ ವೈದ್ಯಕೀಯ ತಂಡಕ್ಕೆ ಸೂಚಿಸಿದರು ಚರಂಡಿ ಸ್ವಚ್ಛಗೊಳಿಸಿ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ತಿಳಿಸಿದರು. ಇನ್ನುಮುಂದೆ ಈ ಪರಿಸ್ಥಿತಿ ನಿರ್ಮಾಣ ಆಗದಂತೆ ಕ್ರಿಯಾಯೋಜನೆ ಸಿದ್ಧ ಪಡಿಸಲು ತಹಶಿಲ್ದಾರರಾದ ನಾಗಯ್ಯ ಹಿರೇಮಠ ಸವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ನಾಗಯ್ಯ ಹಿರೇಮಠ, ನರೇಗಾಸಹಾಯಕ ನಿರ್ದೇಶಕ ಪಂಡಿತ ಶಿಂಧೆ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಪಾಷಾ, ಕಂದಾಯ ನಿರೀಕ್ಷಕ ಪ್ರಶಾಂತ ರಾಠೋಡ, ತಾಲೂಕು ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.