Home ಜಿಲ್ಲೆ ಕಲಬುರಗಿ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕರಣಿ ಸಭೆ:ಬಿತ್ತನೆ ಬೀಜ,ರಸಗೊಬ್ಬರ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

ಜಿಲ್ಲಾ ಕೃಷಿಕ ಸಮಾಜದ ಕಾರ್ಯಕರಣಿ ಸಭೆ:ಬಿತ್ತನೆ ಬೀಜ,ರಸಗೊಬ್ಬರ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

ಕಲಬುರಗಿ,ಮೇ.23: ಮುಂಗಾರು ಆಗಮನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕೆಂದು ಕೃಷಿ ಅಧಿಕಾರಿಗಳಿಗೆ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಧಂಗಾಪೂರ ತಿಳಿಸಿದರು.
ಶುಕ್ರವಾರ ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕರಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತಾಪಿ ಜನರಿಗೆ ಸುಲಭವಾಗಿ ಬೀಜ, ರಸಗೊಬ್ಬರು ಸಿಗಬೇಕು. ಈ ನಿಟ್ಟಿನಲ್ಲಿ ದಾಸ್ತಾನು ಮಾಡಿ ಸಮರ್ಪಕವಾಗಿ ಪೂರೈಕೆಯಾಗುವಂತೆ ಕೃಚಿ ಇಲಾಖೆಯ ಎಲ್ಲಾ ಸಹಾಯಕ ನಿರ್ದೇಶಕರು ಅಗತ್ಯ ಕ್ರಮ ವಹಿಸಬೇಕೆಂದರು.
ಸಭೆಯಲ್ಲಿ ಭಾಗವಹಿಸಿದ ಜಂಡಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಮಾತನಾಡಿ, ಮುಂಗಾರು ಹಂಗಾಮಿನ ಮಳೆಯ ವಿವರ, ಬಿತ್ತನೆ ಬೀಜದ ಲಭ್ಯತೆ, ರಸಗೊಬ್ಬರದ ಸಮರ್ಪಕ ನೀರ್ವಹಣೆಯ ಕುರಿತು ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ದ್ವೀತಿಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಅತಿ ಹೆಚ್ಚು ಶೇ.99.67 ಅಂಕ ಗಳಿಸಿದ ವಿದ್ಯಾರ್ಥಿನಿ ಕು. ಸೃಷ್ಠಿ ಮಲ್ಲಿನಾಥ ಪಾಟೀಲ್ ರವರಿಗೆ ಕೃಷಿಕ ಸಮಾಜದಿಂದ 10,000 ರೂಮ ಪೆÇ್ರೀತ್ಸಾಹಧನ ನೀಡಿ ಸತ್ಕರಿಸಲಾಯಿತು.
ಸಭೆಯಲ್ಲಿ ರಾಜ್ಯ ಪ್ರತಿನಿಧಿಗಳಾದ ಕೇದಾರಲಿಂಗಯ್ಯ ಹಿರೇಮಠ, ಬಸವರಾಜ ರುದ್ರಪ್ಪ ಪಾಟೀಲ, ಕೃಷಿಕ ಸಮಾಜದ ಪ್ರತಿನಿಧಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೃಷಿಕ ಸಮಾಜದ ಅಧ್ಯಕ್ಷರು, ಕೃಷಿ ಇಲಾಖೆಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.