27, 28ಕ್ಕೆ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ

ಬೀದರ್: ಜ.21:ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಜ. 27 ಮತ್ತು 28 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ರೀಡೆಗಳು ಹಾಗೂ ಸ್ಪರ್ಧೆಗಳು ನಡೆಯಲಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಹೆಸರು ನೋಂದಣಿಗೆ ಜ. 25 ಕೊನೆಯ ದಿನವಾಗಿದೆ. ನೌಕರರು https://bidarsports2026.wasmer.app ಲಿಂಕ್ ಬಳಸಿ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.
ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.