Home ಜಿಲ್ಲೆ ಜಿಲ್ಲಾ ಮಟ್ಟದ ಯುವಜನೋತ್ಸವ

ಜಿಲ್ಲಾ ಮಟ್ಟದ ಯುವಜನೋತ್ಸವ


ಧಾರವಾಡ, ನ.೧೯: ಯುವಜನರಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ರಂಗಾಯಣದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಯುವಜನೋತ್ಸವ?೨೦೨೬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಸಾಂಸ್ಕೃತಿಕ ಹಾಗೂ ಸೃಜನಶೀಲ ಚಟುವಟಿಕೆಗಳ ಸಂಗಮವಾಗಿದ್ದ ಈ ಉತ್ಸವದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಯುವ ಕಲಾವಿದರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಯುವಜನರ ಕಲೆ, ಸಂಸ್ಕೃತಿ ಮತ್ತು ಸೃಜನಶೀಲತೆಯ ಅನಾವರಣಕ್ಕೆ ಅತ್ಯುತ್ತಮ ವೇದಿಕೆಯಾಗಿ ಮೂಡಿಬಂದಿತು.


ಯುವಜನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳು ಪ್ರೇಕ್ಷಕರ ಗಮನ ಸೆಳೆದವು. ವಿಶೇ?Àವಾಗಿ ನಮ್ಮ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಜಾನಪದ ನೃತ್ಯ ಹಾಗೂ ಜಾನಪದ ಗೀತೆ, ಗಾಯನಗಳು ನೆರೆದಿದ್ದವರನ್ನು ರಂಜಿಸಿದವು. ಯುವಕರ ಸೃಜನಶೀಲ ಆಲೋಚನೆಗಳಿಗೆ ವೇದಿಕೆಯಾದ ಚಿತ್ರಕಲೆ ಮತ್ತು ಕವನ ರಚನೆ ಸ್ಪರ್ಧೆಗಳಲ್ಲಿ ಅನೇಕ ಪ್ರತಿಭೆಗಳು ತಮ್ಮ ಕೌಶಲ್ಯ ಮೆರೆದರು. ಇದರೊಂದಿಗೆ, ಇಂದಿನ ಯುವಪೀಳಿಗೆಗೆ ಅತ್ಯಗತ್ಯವಾಗಿರುವ ಸಾಮಾಜಿಕ ಸಂದೇಶವನ್ನು ಸಾರುವ ‘ನಶೆ ಮುಕ್ತ ಸಮಾಜ’ ಕುರಿತ ಜಾಗೃತಿ ನಾಟಕಗಳು ಅತ್ಯಂತ ಪರಿಣಾಮಕಾರಿಯಾಗಿ ಪ್ರದರ್ಶನಗೊಂಡು ಮೆಚ್ಚುಗೆಗೆ ಪಾತ್ರವಾದವು.


ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನು?Á್ಠನ ಸಮಿತಿ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು ಮಾತನಾಡಿ, ಯುವಜನರಲ್ಲಿ ಅಡಗಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಇಂತಹ ಉತ್ತಮ ವೇದಿಕೆ ಕಲ್ಪಿಸಿದೆ. ಯುವಕರು ದುಶ್ಚಟಗಳಿಂದ ದೂರವಿದ್ದು, ನಶೆ ಮುಕ್ತ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ಅಧ್ಯಕ್ಷರಾದ ರಾಬರ್ಟ್ ದದ್ದಾಪುರಿ ಅವರು ಮಾತನಾಡಿ, ಕಲೆ ಮತ್ತು ಸಂಸ್ಕೃತಿಯ ತವರೂರಾದ ಧಾರವಾಡದಲ್ಲಿ ಜಾನಪದ ಕಲೆಗಳ ಅನಾವರಣವಾಗುತ್ತಿರುವುದು ಹೆಮ್ಮೆಯ ವಿ?Àಯ. ಕಲೆಯು ಕೇವಲ ಮನರಂಜನೆಯಲ್ಲ, ಅದು ಸಮಾಜವನ್ನು ತಿದ್ದುವ ಪ್ರಬಲ ಅಸ್ತ್ರವಾಗಿದೆ ಎಂದರು.


ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪೂರ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು, ತೀರ್ಪುಗಾರರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳು ಭಾಗವಹಿಸಿದ್ದರು.