
ಗದಗ, ನ೭: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳು, ಸಂಸದೀಯ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ-೨೦೨೬ರ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಯುವ ಸಂಸತ್ತಿನ ಮಾದರಿಯಲ್ಲಿ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆಯ ಕಲಾಪಗಳನ್ನು ನಡೆಸಿದರು. ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿ, ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳು ಚರ್ಚಿಸಿತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಯುವ ಸಂಸತ್ತು ಸಭೆಯಲ್ಲಿ ವಿದ್ಯಾರ್ಥಿಗಳು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರ ಪಾತ್ರಗಳನ್ನು ನಿರ್ವಹಿಸುವ ಮೂಲಕ ಸಂಸದೀಯ ಕಾರ್ಯವಿಧಾನದ ಪ್ರಾಯೋಗಿಕ ಅನುಭವ ಪಡೆದುಕೊಂಡರು. ಸಾರ್ವಜನಿಕ ಸಮಸ್ಯೆಗಳು, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಕೃಷಿ ಇಲಾಖೆ, ಆಹಾರ ನಾಗರಿಕ ಸರಬರಾಜು ಇಲಾಖೆ, ಅರಣ್ಯ ಇಲಾಖೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಕಾರ್ಮಿಕ ಇಲಾಖೆ, ಕೈಮಗ್ಗ ಇಲಾಖೆ, ಸೇರಿದಂತೆ ವಿವಿಧ ಜನಪರ ವಿಷಯಗಳ ಕುರಿತು ಚರ್ಚೆ ನಡೆಸಿದರು. ಗ್ರಾಮೀಣ ಭಾಗದ ಪತ್ರಕರ್ತರ ಸಮಸ್ಯೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನೂ ಪ್ರಸ್ತಾಪಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಸಭೆಯಲ್ಲಿ ಭಾಗವಹಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ಸಂವಾದ, ಭಿನ್ನಾಭಿಪ್ರಾಯಗಳಿಗೆ ಗೌರವ ಹಾಗೂ ಪರಸ್ಪರ ಸಹಕಾರ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಯುವ ಸಂಸತ್ತು ಸಭೆಯು ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು, ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಲು ಹಾಗೂ ಜವಾಬ್ದಾರಿಯುತ ನಿರ್ಧಾರಗಳನ್ನು ಕೈಗೊಳ್ಳುವ ಕುರಿತು ಅರಿವು ಮೂಡಿಸಿತು. ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರಗಳನ್ನು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳು ಸಂಸದೀಯ ವ್ಯವಸ್ಥೆಯಲ್ಲಿನ ಚರ್ಚೆ, ನಿರ್ಣಯ ಹಾಗೂ ಪ್ರಜಾಪ್ರಭುತ್ವದ ಕಾರ್ಯವಿಧಾನವನ್ನು ಅರಿತುಕೊಂಡರು.
ಅAತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಈ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ಪ್ರಾಯೋಗಿಕ ಜ್ಞಾನ ಮತ್ತು ಅನುಭವ ನೀಡುವುದರೊಂದಿಗೆ, ಭವಿಷ್ಯದ ಜವಾಬ್ದಾರಿಯುತ ನಾಗರಿಕರು ಹಾಗೂ ನಾಯಕತ್ವ ಗುಣ ಹೊಂದಿದ ಯುವಜನರನ್ನು ರೂಪಿಸುವ ಮಹತ್ವದ ವೇದಿಕೆಯಾಯಿತು.
ಈ ವಿಧಾನ ಸಭೆಯ ಕಲಾಪದಲ್ಲಿ ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಸಭಾಪತಿ ಮಧುಶ್ರೀ ಮಠಪತಿ, ಮುಂಡರಗಿ ಜೆ.ಎ.ಬಿ.ಎಡ್ ಕಾಲೇಜ್ ಉಪಸಭಾಪತಿ ಶ್ರೀಕಾಂತ್ ತಿಮ್ಮಾಪುರ, ಮುಂಡರಗಿ ಜೆ.ಎ.ಬಿ.ಎಡ್ ಕಾಲೇಜ್ ಮುಖ್ಯಮಂತ್ರಿ ಮಹೇಶ್ ಲಮಾಣಿ, ರೋಣ ಆರ್.ಜೆ.ಬಿ.ಎಡ್ ಕಾಲೇಜು ಉಪಮುಖ್ಯಮಂತ್ರಿ ಬಸನಗೌಡ ದ್ಯಾಮನಗೌಡರ, ಮುಂಡರಗಿ ಜೆ.ಎ.ಬಿ.ಎಡ್ ಕಾಲೇಜ್ ನ ವಿರೋಧ ಪಕ್ಷದ ನಾಯಕ ಮಂಜುನಾಥ ಕಲ್ಮನಿ, ವಿರೋಧ ಪಕ್ಷಕ್ಕೆ ಆಯ್ಕೆಯಾದ ೯೬ ವಿದ್ಯಾರ್ಥಿಗಳು, ಆಡಳಿತ ಪಕ್ಷಕ್ಕೆ ಆಯ್ಕೆಯಾದ ೧೨೯ ವಿದ್ಯಾರ್ಥಿಗಳು ಒಟ್ಟು ೨೨೫ ವಿದ್ಯಾರ್ಥಿಗಳು, ಮಂತ್ರಿ ಮಂಡಲದಲ್ಲಿ ೩೧ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆಯ ಖಾತೆಗಳನ್ನು ಹಂಚಿಕೆ ಮಾಡಿಲಾಯಿತು ಅವರೆಲ್ಲರೂ ಸಭೆಯಲ್ಲಿ ಭಾಗವಹಿಸಿದ್ದರು.ಕಾಲೇಜಿ ನ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.




















