Home ಜಿಲ್ಲೆ ಕಲಬುರಗಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ:ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೋಯಾಬಿನ್ಹಾಗೂ ಸೂರ್ಯಕಾಂತಿ ಖರೀದಿಗೆ ನಿರ್ಧಾರ

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ:ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೋಯಾಬಿನ್ಹಾಗೂ ಸೂರ್ಯಕಾಂತಿ ಖರೀದಿಗೆ ನಿರ್ಧಾರ

ಕಲಬುರಗಿ,ಅ.09: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಯಲಾದ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಕೃಷಿ ಉತ್ಪನ್ನಗಳನ್ನು ಖರೀದಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ನೇತೃತ್ವದ ಜಿಲ್ಲಾ ಟಾಸ್ಕ್ ಪೆÇೀರ್ಸ್ ಸಮಿತಿ ನಿರ್ಧರಿಸಿದೆ.

ರಾಜ್ಯ ಸರ್ಕಾರದ ದಿ.01-10-2026ರ ಆದೇಶದಂತೆ ಹೆಸರು ಕಾಳು ಪ್ರತಿ ಕ್ವಿಂಟಾಲ್‍ಗೆ 8,780 ರೂ. ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‍ವರೆಗೆ, ಸೋಯಾಬೀನ್ ಪ್ರತಿ ಕ್ವಿಂಟಾಲ್‍ಗೆ 5,708 ರೂ. ಗಳಂತೆ ಪ್ರತಿ ಎಕರೆಗೆ 5 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಾಲ್‍ವರೆಗೆ ಹಾಗೂ ಸೂರ್ಯಕಾಂತಿ ಪ್ರತಿ ಕ್ವಿಂಟಾಲ್‍ಗೆ 8,343 ರೂ. ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದಲ್ಲಿ ಖರೀದಿಸಲಾಗುತ್ತದೆ ಎಂದು ಡಿ.ಸಿ. ಇಕ್ರಂ ಶರೀಫ್ ಮತ್ತು ಜಂಟಿ ಕೃಷಿ ನಿರ್ದೇಶಕ ಸಮದ ಪಟೇಲ್ ಅವರು ಜಂಟಿ ಪತ್ತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಮಾರಾಟಕ್ಕೆ ರೈತರು 2026ರ ಡಿಸೆಂಬರ್ 19 ರವರೆಗೆ ನೋಂದಣಿ ಮಾಡಿಕೊಂಡು ಡಿಸೆಂಬರ್ 29 ವರೆಗೆ ಮಾರಾಟ ಮಾಡಬಹುದಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯು ನಡೆಯಲಿದ್ದು, ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವÀನ್ನು ಡಿ.ಬಿ.ಟಿ. ಪೆÇೀರ್ಟಲ್ ಮೂಲಕ ಪಾವತಿಸಲಾಗುತ್ತದೆ. ಇನ್ನು ಪ್ರತಿಯೊಂದು ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. ಯಂತ್ರಗಳ ಮೂಲಕ ರೈತರ ನೊಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಯು.ಐ.ಡಿ.ಎ.ಐ. ಬಯೋಮೇಟ್ರಿಕ್ ಪಡೆಯುವುದು ಕಡ್ಡಾಯವಾಗಿರುತ್ತದೆ.

ಜಿಲ್ಲೆಯ ರೈತ ಭಾಂದವರು ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹಾಗೂ ಎಫ್.ಪಿ.ಓ.ಗಳಿಗೆ ಭೇಟಿ ನೀಡಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಕೃಷಿ ಉತ್ಪನ್ನಗಳನ್ನು ನಿಗದಿತ ಅವಧಿಯಲ್ಲಿ ಮಾರಾಟಕ್ಕೆ ನೋಂದಾಯಿಸಿಕೊಂಡು ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಸಂಸ್ಥೆ, ಸೋಯಾಬೀನ್ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಹಾಗೂ ಸೂರ್ಯಕಾಂತಿ ಖರೀದಿಗೆ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆ.ಓ.ಎಫ್.) ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ.

ಖರೀದಿ ಕೇಂದ್ರಗಳ ವಿವರ: ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿಗೆ 67 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು (ಪಿ.ಎ.ಸಿ.ಎಸ್.) ಹಾಗೂ (ಎಫ್.ಪಿ.ಓ.) ಗಳು, ಸೋಯಾಬೀನ್ ಖರೀದಿಗೆ 55 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ಎಫ್.ಪಿ.ಓ.ಗಳು ಹಾಗೂ ಸೂರ್ಯಕಾಂತಿ ಖರೀದಿಗೆ 11 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಖರೀದಿ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.

ರೈತ ಬಾಂಧವರು ಹೆಸರು ಕಾಳು, ಸೋಯಾಬೀನ್ ನೊಂದಣಿ ಹಾಗೂ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಸಂಸ್ಥೆ-9449864446, ಹೆಸರು ಕಾಳು ನೊಂದಣಿ ಹಾಗೂ ಖರೀದಿಗೆ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಸಂಸ್ಥೆ-9448641163 ಹಾಗೂ ಸೂರ್ಯಕಾಂತಿ ನೊಂದಣಿ ಹಾಗೂ ಖರೀದಿಗೆ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆ-9591812142ಗೆ ಸಂಪರ್ಕಿಸಲು ಕೋರಲಾಗಿದೆ.