Home ಜಿಲ್ಲೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಮೇ ೧೮ರಂದು ಭವ್ಯ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ...

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಮೇ ೧೮ರಂದು ಭವ್ಯ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಮಹಾಸಭೆ

ಯಾದಗಿರಿ :ಮೇ.೧೪: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮೇ ೧೮ರಂದು ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸಂಘದ ಸರ್ವ ಸದಸ್ಯರ ಮಹಾಸಭೆ ವೈಭವದಿಂದ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೧೧ ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಲ್ಲೆಯ ಪತ್ರಕರ್ತರ ೮ ಪ್ರತಿಭಾನ್ವಿತ ಮಕ್ಕಳಿಗೆ ತಲಾ ?೫ ಸಾವಿರ ನಗದು ಬಹುಮಾನ ನೀಡಿ ಆತ್ಮೀಯ ಸನ್ಮಾನ ನೆರವೇರಿಸಲಾಗುವುದು. ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಶಿಕ್ಷಣ ಪ್ರೋತ್ಸಾಹಕ್ಕೆ ಸಂಘ ಮತ್ತೊಮ್ಮೆ ಬದ್ಧತೆಯನ್ನು ಪ್ರದರ್ಶಿಸುತ್ತಿದೆ.

ಇದಾದ ಬಳಿಕ ಮಧ್ಯಾಹ್ನ ೧೨ ಗಂಟೆಗೆ ಸಂಘದ ಸರ್ವ ಸದಸ್ಯರ ಮಹಾಸಭೆ ಜರುಗಲಿದ್ದು, ೨೦೨೪-೨೫ನೇ ಸಾಲಿನ ವಾರ್ಷಿಕ ಲೆಕ್ಕ ಪರಿಶೋಧನಾ ವರದಿ ಮಂಡನೆ ಹಾಗೂ ಅನುಮೋದನೆ, ಜೊತೆಗೆ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ಸಮಗ್ರ ವರದಿ ಮಂಡನೆ ಮತ್ತು ಅನುಮೋದನೆ ಪ್ರಕ್ರಿಯೆ ನಡೆಯಲಿದೆ.

ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ ನಂತರ ಸತತ ನಾಲ್ಕನೇ ಬಾರಿಗೆ ಸರ್ವ ಸದಸ್ಯರ ಸಭೆ ಆಯೋಜಿಸಲಾಗುತ್ತಿದ್ದು, ಸಂಘದ ಪಾರದರ್ಶಕ ಆಡಳಿತ ವ್ಯವಸ್ಥೆ, ಜವಾಬ್ದಾರಿತನ ಹಾಗೂ ಸಂಘಟನಾ ಶಿಸ್ತಿನ ಪ್ರತೀಕವಾಗಿ ವಾರ್ಷಿಕ ಲೆಕ್ಕಪತ್ರ ಮತ್ತು ಕಾರ್ಯ ವರದಿಗಳನ್ನು ಸದಸ್ಯರ ಮುಂದಿಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಭಾವಂತ ಮಕ್ಕಳಿಗೆ ಹೃದಯಸ್ಪರ್ಶಿ ಗೌರವ ಸಲ್ಲಿಸುವ ಈ ಮಹತ್ವದ ಕ್ಷಣಕ್ಕೆ ಜಿಲ್ಲೆಯ ಎಲ್ಲಾ ಸದಸ್ಯರು, ಹಿರಿಯ ಪತ್ರಕರ್ತರು ಹಾಗೂ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.

ಸನ್ಮಾನ ಸಮಾರಂಭದ ಬಳಿಕ ಸರ್ವ ಸದಸ್ಯರ ಮಹಾಸಭೆ ನಡೆಯಲಿದ್ದು, ಸಂಘದ ಭವಿಷ್ಯದ ಕಾರ್ಯಚಟುವಟಿಕೆಗಳ ಕುರಿತೂ ಮಹತ್ವದ ಚರ್ಚೆಗಳು ನಡೆಯಲಿವೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲಪ್ಪ ಸಂಕಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.