Home Lead News ಮುಖ್ಯಮಂತ್ರಿಯಾಗಿ ಅಜ್ಜಯನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ಅಜ್ಜಯನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.


ಇದರೊಂದಿಗೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.


ರಾಜಭವನದ ಗಾಜಿನ ಮನೆಯಲ್ಲಿಂದು ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.


ಡಿ.ಕೆ.ಶಿವಕುಮಾರ್ ಅವರು ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.


ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾವಚನ ಸ್ವೀಕರಿಸಿದರು.


ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್ . ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಡಾ.ಶರಣ್ ಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.


ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.


ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳಂ ಮುಖ್ಯಮಂತ್ರಿ ಸತೀಶನ್ ಹಾಗೂ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀಂದರ್ ಸಿಂಗ್ ಸುಖ್ಖು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.