
ಬೆಂಗಳೂರು, ಆ.3- ಮುಖ್ಯಮಂತ್ರಿ .ಡಿ.ಕೆ.ಶಿವಕುಮಾರ್ ಅವರು ತಮ್ಮ ಮಂತ್ರಿ ಮಂಡವಲವನ್ನು ವಿಸ್ತರಿಸಿದ್ದಾರೆ. 19 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.
ಡಾ.ಅಜಯ್ ಸಿಂಗ್ , ಎಚ್. ಸಿ ಬಾಲಕೃಷ್ಣ, ಕೆ. ಎಸ್. ಬಸವಂತಪ್ಪ, ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಸವರಾಜ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ ದೇವರ ಹಾಗೂ ಅಜ್ಜಯನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ , ಶಾಸಕರಾಗಿರುವ ಎಸ್. ಎಸ್. ಮಲ್ಲಿಕಾರ್ಜುನ , ಬಿ. ನಾಗೇಂದ್ರ ದೇವರ ಹೆಸರಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನರೇಂದ್ರ ಸ್ವಾಮಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪುಟ್ಟರಂಗ ಶೆಟ್ಟಿ, ಶಾಸಕರಾಗಿರುವ ರಘು ಮೂರ್ತಿ ದೇವರ ಹೆಸರಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ರಿಜ್ವಾನ್ ಅರ್ಷದ್ ರುದ್ರಪ್ಪ ಲಮಾಣಿ , ಸಂತೋಷ್ ಲಾಡ್, ಶಿವಲಿಂಗೇಗೌಡ , ಶಿವರಾಜ ತಂಗಡಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ಚೀಕರಿಸಿದರು.
ವಿಜಯಾನಂದ ಕಾಶಪ್ಪನವರ್ ಪಂಚಮ ಪೀಠ, ಬುದ್ಧ ಬಸವ ಹಾಗೂ ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಜಮೀರ್ ಅಹ್ಮದ್ ಖಾನ್ ಅಲ್ಲಾಹು ಹೆಸರಿನಲ್ಲಿ ಇಂಗ್ಲೀಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
19 ಸಚಿವರು ಪಶ್ಚಿಮಕ್ಕೆ ಅಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು 13 ಸಚಿವರು ಪೂರ್ವಕ್ಕೆ ಅಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರುಹಾಜರಾಗಿದ್ದರು.

































