
ಬೀದರ್ : ನಗರದ ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಅಕ್ಕಮಹಾದೇವಿ ಕನ್ಯಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿರುವ ಅರ್ಷಾ ಜಬೀನ್ ಅವರಿಗೆ ರಾಜಸ್ಥಾನದ ಸನ್‌ರೈಸ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
‘ಎ ಕ್ರಿಟಿಕಲ್ ರಿ ಅಪ್ರೆಜಲ್ ಆಫ್ ಅರವಿಂದ ಅಡಿಗಾಸ್ ನಾವೆಲ್ಸ್: ಎ ಸ್ಟಡಿ’ ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ.
ಹಿರಿಯ ಪ್ರಾಧ್ಯಾಪಕ ಡಾ. ಉಮಾಕಾಂತ ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಅರ್ಷಾ ಜಬೀನ್ ಅವರು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು.
ಡಾಕ್ಟರೇಟ್ ಪದವಿ ಪಡೆಯಲು ಸಹಕಾರ ಹಾಗೂ ಪ್ರೋತ್ಸಾಹ ನೀಡಿದ ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯ ಎಲ್ಲ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.































