ವಿಜಯಪುರ, ಅ. 15: ವಿಜಯಪುರ ಜಿಲ್ಲೆಯನ್ನು 371(ಜೆ) ಅಡಿಯಲ್ಲಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಮರುಚಾಲನೆಗೊಳಿಸಿ ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ದೊಡಮನಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು 371(ಜೆ) ವಿಶೇಷ ಸ್ಥಾನಮಾನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದರೊಂದಿಗೆ ಸಂಕಷ್ಟದಲ್ಲಿರುವ ರೈತರ ವಿವಿಧ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು. ಸ್ಥಗಿತಗೊಂಡಿರುವ ಪಿಂಚಣಿ ಯೋಜನೆಗಳನ್ನು ಪುನರಾರಂಭಿಸಿ ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿ ಹಾಗೂ ಗ್ರಾಮೀಣ ಜನರ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬಂಗಾರೆಮ್ಮ ದೊಡಮನಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



















