ಔರಾದ್ :ನ.26: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ದೇಶಮುಖ ಅವರ ಅಭಿನಂದನಾ ಸಮಾರಂಭ ಹಾಗೂ ಹುಟ್ಟುಹಬ್ಬದ ನಿಮಿತ್ತ ಮಂಗಳವಾರ ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳು ಕೈಗೊಳ್ಳಲಾಯಿತು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅನೀಲಕುಮಾರ ದೇಶಮುಖ ಅವರ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಮನುಷ್ಯರಿಗೆ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ. ಮುಖ್ಯವಾಗಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇತ್ತೀಚಿನ ದಿನದಲ್ಲಿ ರಕ್ತಕ್ಕೆ ಬಹಳ ಬೇಡಿಕೆ ಇದ್ದು, ತುರ್ತು ಪರಿಸ್ಥಿತಿಯಲ್ಲಿ ಒಬ್ಬರ ಜೀವ ಉಳಿಸಿದಂತಾಗುತ್ತದೆ” ಎಂದರು.
ರಕ್ತದಾನ ಶಿಬಿರದಲ್ಲಿ ಸುಮಾರು 51ಕ್ಕೂ ಅಧಿಕ ಜನರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಾಸಕ ಪ್ರಭು ಚವ್ಹಾಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಪಕ್ಷದ ಮುಖಂಡರು, ಗಣ್ಯರು ಭೇಟಿಯಾಗಿ ಜನ್ಮದಿನದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಅಶೋಕ ಶೆಂಬೆಳ್ಳೆ, ಮಲ್ಲಿಕಾರ್ಜುನ ಟಂಕಸಾಲೆ, ಶಾಲಿವಾನ ಉದಗಿರೆ, ಬಸವರಾಜ ಶಟಕಾರ, ಮಹಾದೇವ ಮಾಳಕಾರಿ, ಅಮರಸ್ವಾಮಿ ಸ್ಥಾವರಮಠ, ಓಂಪ್ರಕಾಶ ದಡ್ಡೆ, ಆನಂದ ದ್ಯಾಡೆ, ಸಂದೀಪ ಪಾಟೀಲ್, ಸುಧಾಕರ ಕೊಳ್ಳುರ್, ಮಹಾದೇವ ಶಿಂಧೆ, ಅಂಬಾದಾಸ ನಳಗೆ, ಧನಾಜಿ ರಾಠೋಡ್, ಸಂಗ್ರಾಮ ದೇಶಮುಖ, ಕಿರಣ ದೇಶಮುಖ, ಸಂತೋಷ ದೇಶಮುಖ, ದತ್ತಾತ್ರಿ ಹಾವರ್ಗೆ ಸೇರಿದಂತೆ ಇನ್ನಿತರರಿದ್ದರು. ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಎಲ್ಲರಿಗೂ ಮತ್ತು ರಕ್ತದಾನ ಮಾಡಿದವರಿಗೂ ದೇಶಮುಖ ಕೃತಜ್ಞತೆ ಸಲ್ಲಿಸಿದ್ದಾರೆ.























