ಅಹಮದಾಬಾದ್ ವಿಮಾನ ದುರಂತಕ್ಕೆ ಡಾ. ಅಂಬಾರಾಯ ಅಷ್ಠಗಿ ಕಂಬನಿ

ಕಲಬುರಗಿ : ಜೂ.13:ಅಹಮದಾಬಾದನಲ್ಲಿ ನಡೆದ ವಿಮಾನ ದುರಂತದಲ್ಲಿ ಗುಜರಾತ್‍ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಸುದ್ದಿ ತಿಳಿದು ಆಘಾತವಾಗಿದೆ.
ಇದು ಅತ್ಯಂತ ನೋವಿನ ಘಳಿಗೆಯಾಗಿದ್ದೂ, ಈ ಘಟನೆಯಲ್ಲಿ ನಿಧನ ಹೊಂದಿದವರ ಸಾವಿಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಕಂಬನಿ ಮಿಡಿದಿದ್ದಾರೆ.

ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ ಮತ್ತು ಗಾಯಗೊಂಡ ಪ್ರಯಾಣಿಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಡಾ ಅಂಬಾರಾಯ ಅಷ್ಠಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.