
ಲಕ್ಷ್ಮೇಶ್ವರ,ಏ14: ತಾಲೂಕಿನ ಯಳವತ್ತಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವವನ್ನು ಆಚರಿಸಲಾಯಿತು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪಿಡಿಒ ಸವಿತಾ ಹುನಗುಂದವರು ಪುಷ್ಪಾರ್ಚನೆ ಮಾಡಿ ಮಾತನಾಡಿ ಅವರು ಭಾರತಕ್ಕೆ ನೀಡಿದ ಸಂವಿಧಾನ ಒಂದು ಮಹಾನ್ ಗ್ರಂಥವಾಗಿದೆ ಸಂವಿಧಾನದಲ್ಲಿನ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತುಕೊಂಡು ಎಲ್ಲರೂ ಸಂವಿಧಾನಕ್ಕೆ ಬದ್ಧರಾಗಿ ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಬಿರಣ್ಣವರ ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಇದ್ದರು.























